IND vs PAK: ಪಾಕಿಸ್ತಾನ್ ವಿರುದ್ಧ ಹೀನಾಯವಾಗಿ ಸೋತ ಭಾರತ
India A vs Pakistan A: 137 ರನ್ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ಎ ತಂಡಕ್ಕೆ ಮಾಝ್ ಸದಾಖತ್ ಸ್ಫೋಟಕ ಆರಂಭ ಒದಗಿಸಿದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮಾಝ್ 47 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 79 ರನ್ ಬಾರಿಸಿದರು. ಈ ಮೂಲಕ ಪಾಕಿಸ್ತಾನ್ ತಂಡ 13.2 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 137 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ದೋಹಾದಲ್ಲಿ ನಡೆಯುತ್ತಿರುವ ರೈಸಿಂಗ್ ಸ್ಟಾರ್ ಏಷ್ಯಾಕಪ್ ಟೂರ್ನಿಯ 6ನೇ ಪಂದ್ಯದಲ್ಲಿ ಭಾರತ ಎ ವಿರುದ್ಧ ಪಾಕಿಸ್ತಾನ್ ಎ ತಂಡ ಭರ್ಜರಿ ಜಯ ಸಾಧಿಸಿದೆ. ವೆಸ್ಟ್ ಎಂಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ವೈಭವ್ ಸೂರ್ಯವಂಶಿ ಉತ್ತಮ ಆರಂಭ ಒದಗಿಸಿದ್ದರು. ಆದರೆ ಮತ್ತೋರ್ವ ಆರಂಭಿಕ ದಾಂಡಿಗ ಪ್ರಿಯಾಂಶ್ ಆರ್ಯ ಕೇವಲ 10 ರನ್ಗಳಿಸಿ ವಿಕೆಟ್ ಒಪ್ಪಿಸಿದರು.
ಆ ಬಳಿಕ ಬಂದ ನಮನ್ ಧೀರ್ 35 ರನ್ ಬಾರಿಸಿ ಔಟಾದರು. ಇನ್ನು ಜಿತೇಶ್ ಶರ್ಮಾ 5 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ನೆಹಾಲ್ ವಧೇರಾ (8) ಕೂಡ ವಿಕೆಟ್ ಕೈಚೆಲ್ಲಿದರು. ಇದಾಗ್ಯೂ ಮತ್ತೊಂದೆಡೆ 28 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ವೈಭವ್ ಸೂರ್ಯವಂಶಿ 45 ರನ್ ಬಾರಿಸಿದರು.
ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ವೈಭವ್ ಕೂಡ ಔಟಾದರು. ಆ ಬಳಿಕ ಬಂದ ಅಶುತೋಷ್ ಶರ್ಮಾ (0), ರಮಣ್ದೀಪ್ (11) ಬಂದ ವೇಗದಲ್ಲೇ ಹಿಂತಿರುಗಿದರು. ಪರಿಣಾಮ ಟೀಮ್ ಇಂಡಿಯಾ 19 ಓವರ್ಗಳಲ್ಲಿ 136 ರನ್ಗಳಿಸಿ ಆಲೌಟ್ ಆಯಿತು.
137 ರನ್ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ಎ ತಂಡಕ್ಕೆ ಮಾಝ್ ಸದಾಖತ್ ಸ್ಫೋಟಕ ಆರಂಭ ಒದಗಿಸಿದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮಾಝ್ 47 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 79 ರನ್ ಬಾರಿಸಿದರು. ಈ ಮೂಲಕ ಪಾಕಿಸ್ತಾನ್ ತಂಡ 13.2 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 137 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ್ ಎ ತಂಡವು ರೈಸಿಂಗ್ ಸ್ಟಾರ್ ಏಷ್ಯಾಕಪ್ ಟೂರ್ನಿಯಲ್ಲಿ ಸೆಮಿಫೈನಲ್ಗೇರಿದೆ.
ಭಾರತ ಎ ಪ್ಲೇಯಿಂಗ್ 11: ವೈಭವ್ ಸೂರ್ಯವಂಶಿ , ಪ್ರಿಯಾಂಶ್ ಆರ್ಯ , ನೆಹಾಲ್ ವಧೇರಾ , ನಮನ್ ಧೀರ್ ,ಜಿತೇಶ್ ಶರ್ಮಾ (ನಾಯಕ) , ರಮಣ್ದೀಪ್ ಸಿಂಗ್ , ಅಶುತೋಷ್ ಶರ್ಮಾ , ಹರ್ಷ್ ದುಬೆ , ಯಶ್ ಠಾಕೂರ್ , ಗುರ್ಜಪ್ನೀತ್ ಸಿಂಗ್ , ಸುಯಶ್ ಶರ್ಮಾ.
ಪಾಕಿಸ್ತಾನ್ ಎ ಪ್ಲೇಯಿಂಗ್ 11: ಮೊಹಮ್ಮದ್ ನಯೀಮ್ , ಮಾಝ್ ಸದಾಖತ್ , ಯಾಸಿರ್ ಖಾನ್ , ಮೊಹಮ್ಮದ್ ಫೈಕ್ ,
ಇರ್ಫಾನ್ ಖಾನ್ (ನಾಯಕ) , ಸಾದ್ ಮಸೂದ್ , ಘಾಜಿ ಘೋರಿ (ವಿಕೆಟ್ ಕೀಪರ್) , ಶಾಹಿದ್ ಅಜೀಜ್ , ಉಬೈದ್ ಶಾ , ಅಹ್ಮದ್ ಡೇನಿಯಲ್ , ಸೂಫಿಯಾನ್ ಮುಖೀಮ್.
