VIDEO: ಕೊನೊಲಿ ಸೂಪರ್ ಕ್ಯಾಚ್ಗೆ ಕೊಹ್ಲಿ ಔಟ್
IND vs AUS 1st ODI: ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ 10 ಓವರ್ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 27 ರನ್ ಕಲೆಹಾಕಿದೆ. ಟೀಮ್ ಇಂಡಿಯಾ ಪರ ಟಾಪ್-3 ನಲ್ಲಿ ಕಣಕ್ಕಿಳಿದ ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಔಟಾಗಿದ್ದಾರೆ.
ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 8 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್ಗಳಿಸಲು ಸಾಧ್ಯವಾಗಲಿಲ್ಲ.
ಇದರ ನಡುವೆ ಮಿಚೆಲ್ ಸ್ಟಾರ್ಕ್ ಎಸೆದ ಎಸೆತವನ್ನು ಡೀಪ್ ಬ್ಯಾಕ್ವರ್ಡ್ ಪಾಯಿಂಟ್ನತ್ತ ಬಾರಿಸಲು ಯತ್ನಿಸಿದ್ದರು. ಆದರೆ ಫ್ರಂಟ್ ಲೈನ್ ಫೀಲ್ಡಿಂಗ್ನಲ್ಲಿದ್ದ ಕೂಪರ್ ಕೊನೊಲಿ ಅತ್ಯುತ್ತಮವಾಗಿ ಚೆಂಡನ್ನು ಹಿಡಿಯುವ ಮೂಲಕ ವಿರಾಟ್ ಕೊಹ್ಲಿಗೆ ಪೆವಿಲಿಯನ್ ಹಾದಿ ತೋರಿಸಿದರು.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ 10 ಓವರ್ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 27 ರನ್ ಕಲೆಹಾಕಿದೆ. ಟೀಮ್ ಇಂಡಿಯಾ ಪರ ಟಾಪ್-3 ನಲ್ಲಿ ಕಣಕ್ಕಿಳಿದ ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಔಟಾಗಿದ್ದಾರೆ.

