IND vs AUS: ಆ ಒಂದು ಅದ್ಭುತ ದೃಶ್ಯಕ್ಕೆ ಸಾಕ್ಷಿಯಾಯ್ತು ನರೇಂದ್ರ ಮೋದಿ ಸ್ಟೇಡಿಯಂ: ವಿಡಿಯೋ ನೋಡಿ
ICC World Cup 2023: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೂ ಮುನ್ನ ಭಾರತದ ರಾಷ್ಟ್ರಗೀತೆ ಮೊಳಗಿದಾಗ ಪ್ರೇಕ್ಷಕರು ಎದ್ದು ನಿಂತು ಗೌರವ ಸೂಚಿಸಿದ್ದು, 1 ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಒಟ್ಟಾಗಿ ರಾಷ್ಟ್ರಗೀತೆ ಹಾಡಿದ್ದಾರೆ. ಆ ಮೂಲಕ ನರೇಂದ್ರ ಮೋದಿ ಸ್ಟೇಡಿಯಂ ಅದ್ಭುತ ದೃಶ್ಯಕ್ಕೆ ಸಾಕ್ಷಿಯಾಗಿದೆ.
ವಿಶ್ವದ ಅತಿದೊಡ್ಡ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ, ಭಾರತ- ಆಸ್ಟ್ರೇಲಿಯಾ (IND vs AUS) ತಂಡಗಳ ಕ್ಲೈಮ್ಯಾಕ್ಸ್ ಕದನ ನಡೆಯುತ್ತಿದೆ. ಆಸ್ಟ್ರೇಲಿಯಾ ಗೆಲ್ಲಲು ಟೀಂ ಇಂಡಿಯಾ 241 ರನ್ಗಳ ಗುರಿ ನೀಡಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇನ್ನು ಪಂದ್ಯ ಆರಂಭಕ್ಕೂ ಮುನ್ನ ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು, 1 ಲಕ್ಷಕ್ಕೂ ಹೆಚ್ಚು ಕ್ರಿಕೆಟ್ ಅಭಿಮಾನಿಗಳು ಎದ್ದು ನಿಂತು ರಾಷ್ಟ್ರಗೀತೆಗೆ ಧ್ವನಿಗೂಡಿಸಿದ್ದಾರೆ. ಈ ಅದ್ಭುತ ದೃಶ್ಯದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರೋಮಾಂಚನ ಮೂಡಿಸುತ್ತದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos