ರಿಷಬ್ ಪಂತ್ ಆರ್ಭಟಕ್ಕೆ 50 ವರ್ಷಗಳ ಹಳೆಯ ದಾಖಲೆ ಉಡೀಸ್..! ವಿಡಿಯೋ ನೋಡಿ

ರಿಷಬ್ ಪಂತ್ ಆರ್ಭಟಕ್ಕೆ 50 ವರ್ಷಗಳ ಹಳೆಯ ದಾಖಲೆ ಉಡೀಸ್..! ವಿಡಿಯೋ ನೋಡಿ

ಪೃಥ್ವಿಶಂಕರ
|

Updated on:Jan 04, 2025 | 5:14 PM

Rishabh Pant: ಸಿಡ್ನಿ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಸ್ಫೋಟಕ ಅರ್ಧಶತಕ ಗಳಿಸಿದ್ದಾರೆ. ಪಂತ್ 150+ ಸ್ಟ್ರೈಕ್ ರೇಟ್‌ನಲ್ಲಿ 33 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಒಳಗೊಂಡ 61 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಈ ಮೂಲಕ ಪಂತ್ 50 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ವಾಸ್ತವವಾಗಿ 1975 ರಲ್ಲಿ ವೆಸ್ಟ್ ಇಂಡೀಸ್‌ನ ರಾ ಫ್ರೆಡೆರಿಕ್ಸ್ ಆಸ್ಟ್ರೇಲಿಯನ್ ನೆಲದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದರು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟೆಸ್ಟ್ ಪಂದ್ಯ ಸಿಡ್ನಿಯಲ್ಲಿ ನಡೆಯುತ್ತಿದೆ. ಈ ಪಂದ್ಯದ ಎರಡನೇ ದಿನ ಟೀಂ ಇಂಡಿಯಾ 145 ರನ್‌ಗಳ ಮುನ್ನಡೆ ಸಾಧಿಸಿದೆ. ಇದರಲ್ಲಿ ರಿಷಭ್ ಪಂತ್ ಕೊಡುಗೆ ಅಪಾರವಾಗಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್‌ ನಡೆಸಿದ ಪಂತ್‌ 29 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಅಂತಿಮವಾಗಿ ಪಂತ್ 33 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಒಳಗೊಂಡ 61 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು.

50 ವರ್ಷಗಳ ಹಳೆಯ ದಾಖಲೆ

ಈ ಅದ್ಭುತ ಅರ್ಧಶತಕದ ಮೂಲಕ ಪಂತ್ 50 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ವಾಸ್ತವವಾಗಿ 1975 ರಲ್ಲಿ, ವೆಸ್ಟ್ ಇಂಡೀಸ್‌ನ ರಾ ಫ್ರೆಡೆರಿಕ್ಸ್ ಆಸ್ಟ್ರೇಲಿಯನ್ ನೆಲದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದರು. ಫ್ರೆಡೆರಿಕ್ಸ್ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದೀಗ 29 ಎಸೆತಗಳಲ್ಲಿ ಈ ಸಾಧನೆ ಮಾಡಿರುವ ರಿಷಬ್ ಪಂತ್ ಆಸ್ಟ್ರೇಲಿಯಾ ನೆಲದಲ್ಲಿ ಅತಿವೇಗದ ಅರ್ಧಶತಕ ಸಿಡಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಸರಣಿಯಲ್ಲಿ 250ಕ್ಕೂ ಹೆಚ್ಚು ರನ್

ಸಿಡ್ನಿ ಟೆಸ್ಟ್‌ಗೂ ಮುನ್ನ ಈ ಸರಣಿಯಲ್ಲಿ ರಿಷಭ್ ಪಂತ್ ಯಾವುದೇ ದೊಡ್ಡ ಇನ್ನಿಂಗ್ಸ್ ಆಡಲಾಗಲಿಲ್ಲ. ಆದರೆ ಪ್ರತಿಯೊಂದು ಪಂದ್ಯದಲ್ಲೂ ಉತ್ತಮ ಆರಂಭವನ್ನೇ ಪಡೆದಿದ್ದ ಪಂತ್ ಅದನ್ನು ಬಿಗ್ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ವಿಫಲರಾಗಿದ್ದರು. ಇದರಿಂದಾಗಿ ಅವರು ಆಡಿದ 5 ಪಂದ್ಯಗಳ ಸರಣಿಯಲ್ಲಿ 9 ಇನ್ನಿಂಗ್ಸ್‌ಗಳಲ್ಲಿ 255 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 04, 2025 05:12 PM