ನಮಸ್ಕಾರ ಕಣಣ್ಣ… ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ವಿಡಿಯೋ ವೈರಲ್
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 8 ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾ ಕಾಂಗರೂನಾಡಿಗೆ ತೆರಳಿದೆ. ಬುಧವಾರ ದೆಹಲಿ ಏರ್ಪೋರ್ಟ್ನಲ್ಲಿ ಜೊತೆಗೂಡಿದ ಟೀಮ್ ಇಂಡಿಯಾ ಆಟಗಾರರು, ಅಲ್ಲಿಂದ ನೇರವಾಗಿ ಪರ್ತ್ಗೆ ಪ್ರಯಾಣಿಸಿದ್ದಾರೆ. ಈ ಪ್ರಯಾಣಕ್ಕೂ ಮುನ್ನ ವಿರಾಟ್ ಕೊಹ್ಲಿ ಲಂಡನ್ನಿಂದ ದೆಹಲಿಗೆ ಆಗಮಿಸಿದ್ದರು.
ಇತ್ತ ಮುಂಬೈನಿಂದ ಬಂದ ರೋಹಿತ್ ಶರ್ಮಾ ಟೀಮ್ ಬಸ್ನಲ್ಲಿ ವಿರಾಟ್ ಕೊಹ್ಲಿಯನ್ನು ಕಾಣುತ್ತಿದ್ದಂತೆ ಕಿಚಾಯಿಸುವಂತೆ ನಮಸ್ಕರಿಸುತ್ತಿರುವುದು ಕಂಡು ಬಂತು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಬ್ಬರ ನಡುವಣ ಫ್ರೆಂಡ್ಶಿಪ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಅಂದಹಾಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಭೇಟಿಯಾಗಿ 7 ತಿಂಗಳುಗಳೇ ಕಳೆದಿವೆ. ಕೊನೆಯ ಬಾರಿ ಇಬ್ಬರು ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಕಣಕ್ಕಿಳಿದಿದ್ದರು. ಇದಾದ ಬಳಿಕ ವಿರಾಟ್ ಕೊಹ್ಲಿ ಲಂಡನ್ಗೆ ತೆರಳಿದ್ದರು. ಇತ್ತ ರೋಹಿತ್ ಶರ್ಮಾ ಭಾರತಕ್ಕೆ ಮರಳಿದ್ದರು. ಇದೀಗ ಏಳು ತಿಂಗಳುಗಳ ಬಳಿಕ ಟೀಮ್ ಇಂಡಿಯಾದ ದಿಗ್ಗಜರು ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಮೂರು ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಐದು ಮ್ಯಾಚ್ಗಳ ಟಿ20 ಸರಣಿಯನ್ನೂ ಸಹ ಆಡಲಿದೆ.

