IND vs AUS: ಕಾಂಗರೂ ಬೇಟೆಗೆ ಟೀಮ್ ಇಂಡಿಯಾ ಕಠಿಣ ತಾಲೀಮು
India vs Australia Schedule 2025: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ವೈಟ್ ಬಾಲ್ ಸರಣಿ ಆಡಲು ಸಜ್ಜಾಗಿದೆ. ಭಾನುವಾರದಿಂದ (ಅ.19) ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎಂಟು ಮ್ಯಾಚ್ಗಳ ಸರಣಿ ಶುರುವಾಗಲಿದ್ದು, ಈ ಸರಣಿಯ ಮೂಲಕ ಶುಭ್ಮನ್ ಗಿಲ್ ಟೀಮ್ ಇಂಡಿಯಾ ಏಕದಿನ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ನಾಳೆಯಿಂದ (ಅ.19) ಶುರುವಾಗಲಿದೆ. ಪರ್ತ್ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಕಠಿಣ ತಾಲೀಮಿನಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಕಸರತ್ತಿನ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.
ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯಲಿದ್ದಾರೆ. ಅಂದರೆ ಚಾಂಪಿಯನ್ಸ್ ಟ್ರೋಫಿ ಬಳಿಕ ಇಬ್ಬರು ದಿಗ್ಗಜರು ಟೀಮ್ ಇಂಡಿಯಾ ಪರ ಒಂದೇ ಪಂದ್ಯವಾಡಿಲ್ಲ. ಟೆಸ್ಟ್ ಹಾಗೂ ಟಿ20 ಕ್ರಿಕೆಟ್ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಈ ಸರಣಿಯು ತುಂಬಾ ಮಹತ್ವದ್ದು.
ಏಕೆಂದರೆ 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೆ ಮುಂಬರುವ ಸರಣಿಗಳಲ್ಲಿ ಇಬ್ಬರು ಸಹ ಉತ್ತಮ ಪ್ರದರ್ಶನ ನೀಡಬೇಕಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ನಿರ್ಣಾಯಕ ಎನ್ನಲಾಗುತ್ತದೆ. ಈ ಸರಣಿಗೆ ಭಾರತ ಏಕದಿನ ತಂಡ ಈ ಕೆಳಗಿನಂತಿದೆ…

