IND vs AUS: ಕಾಂಗರೂ ಬೇಟೆಗೆ ಟೀಮ್ ಇಂಡಿಯಾ ಕಠಿಣ ತಾಲೀಮು

Updated on: Oct 18, 2025 | 12:58 PM

India vs Australia Schedule 2025: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ವೈಟ್ ಬಾಲ್​ ಸರಣಿ ಆಡಲು ಸಜ್ಜಾಗಿದೆ. ಭಾನುವಾರದಿಂದ (ಅ.19) ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎಂಟು ಮ್ಯಾಚ್​ಗಳ ಸರಣಿ ಶುರುವಾಗಲಿದ್ದು, ಈ ಸರಣಿಯ ಮೂಲಕ ಶುಭ್​ಮನ್ ಗಿಲ್ ಟೀಮ್ ಇಂಡಿಯಾ ಏಕದಿನ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ನಾಳೆಯಿಂದ (ಅ.19) ಶುರುವಾಗಲಿದೆ. ಪರ್ತ್​​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಕಠಿಣ ತಾಲೀಮಿನಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಕಸರತ್ತಿನ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯಲಿದ್ದಾರೆ. ಅಂದರೆ ಚಾಂಪಿಯನ್ಸ್ ಟ್ರೋಫಿ ಬಳಿಕ ಇಬ್ಬರು ದಿಗ್ಗಜರು ಟೀಮ್ ಇಂಡಿಯಾ ಪರ ಒಂದೇ ಪಂದ್ಯವಾಡಿಲ್ಲ. ಟೆಸ್ಟ್ ಹಾಗೂ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಈ ಸರಣಿಯು ತುಂಬಾ ಮಹತ್ವದ್ದು.

ಏಕೆಂದರೆ 2027ರ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೆ ಮುಂಬರುವ ಸರಣಿಗಳಲ್ಲಿ ಇಬ್ಬರು ಸಹ ಉತ್ತಮ ಪ್ರದರ್ಶನ ನೀಡಬೇಕಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ನಿರ್ಣಾಯಕ ಎನ್ನಲಾಗುತ್ತದೆ. ಈ ಸರಣಿಗೆ ಭಾರತ ಏಕದಿನ ತಂಡ ಈ ಕೆಳಗಿನಂತಿದೆ…