AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಡಕ್​ಮ್ಯಾನ್... ಬಂದ ಕೊಹ್ಲಿ... ಹೋದ ಕೊಹ್ಲಿ

Virat Kohli: ಡಕ್​ಮ್ಯಾನ್… ಬಂದ ಕೊಹ್ಲಿ… ಹೋದ ಕೊಹ್ಲಿ

ಝಾಹಿರ್ ಯೂಸುಫ್
|

Updated on: Oct 23, 2025 | 9:50 AM

Share

India vs Australia 2nd ODI: ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಶುಭ್​​ಮನ್ ಗಿಲ್ (4) ಹಾಗೂ ವಿರಾಟ್ ಕೊಹ್ಲಿ (0) ವಿಕೆಟ್ ಕಳೆದುಕೊಂಡಿದೆ.

ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ (0) ಬಲಗೈ ವೇಗಿ ಕ್ಸೇವಿಯರ್ ಬಾರ್ಟ್ಲೆಟ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರ ನಡೆದರು.

ಇದಕ್ಕೂ ಮುನ್ನ ಪರ್ತ್​ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್​​ ಎಸೆತದಲ್ಲಿ ಶೂನ್ಯಕ್ಕೆ ಕ್ಯಾಚಿತ್ತು ನಿರ್ಗಮಿಸಿದ್ದರು. ಇದೀಗ ಮತ್ತೊಮ್ಮೆ ಸೊನ್ನೆ ಸುತ್ತುವ ಮೂಲಕ ನಿರಾಸೆ ಮೂಡಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಶುಭ್​​ಮನ್ ಗಿಲ್ (4) ಹಾಗೂ ವಿರಾಟ್ ಕೊಹ್ಲಿ (0) ವಿಕೆಟ್ ಕಳೆದುಕೊಂಡಿದೆ. ಅಲ್ಲದೆ 10 ಓವರ್​ಗಳ ಮುಕ್ತಾಯದ ವೇಳೆಗೆ ಭಾರತ ತಂಡವು 2 ವಿಕೆಟ್ ನಷ್ಟಕ್ಕೆ ಕೇವಲ 29 ರನ್ ಕಲೆಹಾಕಿದೆ.

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್.

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹೇಝಲ್​ವುಡ್.