IND vs AUS, ICC World Cup Final: ರಾತ್ರಿ 1 ಗಂಟೆಗೆ ನರೇಂದ್ರ ಮೋದಿ ಸ್ಟೇಡಿಯಂ ಬಳಿ ಜಮಾಯಿಸಿದ ಫ್ಯಾನ್ಸ್: ವಿಡಿಯೋ ನೋಡಿ

Updated on: Nov 19, 2023 | 7:39 AM

Narendra Modi Stadium: ವಿಶ್ವಕಪ್ ಫೈನಲ್ ಕ್ರೇಜ್ ಎಷ್ಟಿದೆ ಎಂದರೆ ರಾತ್ರಿ 1 ಗಂಟೆಯ ಹೊತ್ತಿಗೆನೇ ನರೇಂದ್ರ ಮೋದಿ ಸ್ಟೇಡಿಯಂ ಬಳಿ ಫ್ಯಾನ್ಸ್ ಬಂದು ಕುಳಿತಿದ್ದಾರೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಹೌಸ್​ಫುಲ್ ಆಗುವುದು ಖಚಿತವಾಗಿದ್ದು, ಟೀಮ್ ಇಂಡಿಯಾಕ್ಕೆ ದೊಡ್ಡ ಮಟ್ಟದ ಬೆಂಬಲ ಸಿಗಲಿದೆ.

2023ರ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್​ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಒಂದು ಪ್ರಶಸ್ತಿಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತ ಹಾಗೂ ಪ್ಯಾಟ್ ಕಮ್ಮಿನ್ಸ್ ಅವರ ಆಸ್ಟ್ರೇಲಿಯಾ (India vs Australia) ತಂಡಗಳು ಸೆಣೆಸಾಟ ನಡೆಸಲಿವೆ. ಇಡೀ ಭಾರತವೇ ಟೀಮ್ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿಯುವುದನ್ನು ನೋಡಲು ಕಾದು ಕುಳಿತಿದೆ. ಅಭಿಮಾನಿಗಳಂತು ದೊಡ್ಡ ಸಂಖ್ಯೆಯಲ್ಲಿ ಪಂದ್ಯ ವೀಕ್ಷಿಸಲು ತೆರಳುತ್ತಿದ್ದಾರೆ. ವಿಶ್ವಕಪ್ ಫೈನಲ್ ಕ್ರೇಜ್ ಎಷ್ಟಿದೆ ಎಂದರೆ ರಾತ್ರಿ 1 ಗಂಟೆಯ ಹೊತ್ತಿಗೆನೇ ನರೇಂದ್ರ ಮೋದಿ ಸ್ಟೇಡಿಯಂ ಬಳಿ ಫ್ಯಾನ್ಸ್ ಬಂದು ಕುಳಿತಿದ್ದಾರೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಹೌಸ್​ಫುಲ್ ಆಗುವುದು ಖಚಿತವಾಗಿದ್ದು, ಟೀಮ್ ಇಂಡಿಯಾಕ್ಕೆ ದೊಡ್ಡ ಮಟ್ಟದ ಬೆಂಬಲ ಸಿಗಲಿದೆ. ಸ್ಟೇಡಿಯಂ ಹೊರಗಡೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ. ಭಾರತದ ಟೀ-ಶರ್ಟ್ ದಾಖಲೆ ಮಟ್ಟದಲ್ಲಿ ಸೇಲ್ ಆಗಿದೆಯಂತೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More