VIDEO: ಭಾರತ vs ಇಂಗ್ಲೆಂಡ್ ಟೆಸ್ಟ್: ಹೀಗೂ ಔಟಾಗ್ತಾರಾ?
England vs India, 2nd Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 87 ರನ್ ಬಾರಿಸಿ ಮಿಂಚಿದ್ದಾರೆ. ಹಾಗೆಯೇ ನಾಯಕ ಶುಭ್ಮನ್ ಗಿಲ್ (114) ಅಜೇಯ ಶತಕ ಸಿಡಿಸಿದ್ದಾರೆ. ಈ ಮೂಲಕ ಭಾರತ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 310 ರನ್ಗಳಿಸಿದೆ.
ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿರುವ ನಿತೀಶ್ ಕುಮಾರ್ ರೆಡ್ಡಿ ಕೇವಲ 1 ರನ್ಗಳಿಸಿ ನಿರಾಸೆ ಮೂಡಿಸಿದ್ದಾರೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ (1) ಕ್ರಿಸ್ ವೋಕ್ಸ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಆದರೆ ಅವರು ಔಟಾದ ರೀತಿ ಇದೀಗ ಚರ್ಚೆಗೆ ಕಾರಣವಾಗಿದೆ.
ಕ್ರಿಸ್ ವೋಕ್ಸ್ ಫಸ್ಟ್ ಸ್ಟಂಪ್ನತ್ತ ಸತತವಾಗಿ ಚೆಂಡೆಸೆಯುತ್ತಿದ್ದರೂ, ನಿತೀಶ್ ಕುಮಾರ್ ರಕ್ಷಣಾತ್ಮಕವಾಗಿ ಆಡಲು ಮುಂದಾಗಿರಲಿಲ್ಲ. ಇತ್ತ ನಿತೀಶ್ ಚೆಂಡನ್ನು ಗುರುತಿಸುವಲ್ಲಿ ವಿಫಲರಾಗುತ್ತಿದ್ದಾರೆ ಎಂಬುದನ್ನು ಗ್ರಹಿಸಿದ ವೋಕ್ಸ್ ಚೆಂಡನ್ನು ತುಸು ಹಿಂದಕ್ಕೆ ಪಿಚ್ ಮಾಡಿ ವಿಕೆಟ್ ಎಗರಿಸುವಲ್ಲಿ ಯಶಸ್ವಿಯಾದರು. ವಿಶೇಷ ಎಂದರೆ ಈ ಎಸೆತವನ್ನು ಕೂಡ ನಿತೀಶ್ ಕುಮಾರ್ ಆಡದೇ ಬಿಟ್ಟಿದ್ದರು. ಅಂದರೆ ರಕ್ಷಣಾತ್ಮಕವಾಗಿ ಆಡಲು ಮುಂದಾಗಿರಲಿಲ್ಲ. ಇದೀಗ ನಿತೀಶ್ ಕುಮಾರ್ ರೆಡ್ಡಿ ಅವರ ಕ್ಲೀನ್ ಬೌಲ್ಡ್ ವಿಡಿಯೋ ವೈರಲ್ ಆಗಿದ್ದು, ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಅನೇಕರು ಹೀಗೂ ಔಟಾಗ್ತಾರಾ? ಎಂದು ಪ್ರಶ್ನಿಸಿದ್ದಾರೆ.
ಅಂದಹಾಗೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಾರ್ದೂಲ್ ಠಾಕೂರ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿಗೆ ಈ ಪಂದ್ಯದಲ್ಲಿ ಚಾನ್ಸ್ ನೀಡಲಾಗಿದೆ. ಅದರಂತೆ ಸಿಕ್ಕ ಅವಕಾಶದಲ್ಲಿ ನಿತೀಶ್ 1 ರನ್ಗಳಿಸಿ ನಿರಾಸೆ ಮೂಡಿಸಿದ್ದಾರೆ. ಇದಾಗ್ಯೂ ಬೌಲಿಂಗ್ನಲ್ಲಿ ಕಮಾಲ್ ಮಾಡಲಿದ್ದಾರಾ ಕಾದು ನೋಡಬೇಕಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 87 ರನ್ ಬಾರಿಸಿ ಮಿಂಚಿದ್ದಾರೆ. ಹಾಗೆಯೇ ನಾಯಕ ಶುಭ್ಮನ್ ಗಿಲ್ (114) ಅಜೇಯ ಶತಕ ಸಿಡಿಸಿದ್ದಾರೆ. ಈ ಮೂಲಕ ಭಾರತ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 310 ರನ್ಗಳಿಸಿದೆ.

ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ

ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್ವೈ ಗೊತ್ತಿಲ್ಲದಿರುತ್ತದೆಯೇ?

ಕೋರ್ಟ್ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
