AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಡ್ರೆಸ್ಸಿಂಗ್​ ರೂಮ್​ನಲ್ಲಿ ರಿಷಭ್ ಪಂತ್ ಕೋಪ-ತಾಪ

VIDEO: ಡ್ರೆಸ್ಸಿಂಗ್​ ರೂಮ್​ನಲ್ಲಿ ರಿಷಭ್ ಪಂತ್ ಕೋಪ-ತಾಪ

ಝಾಹಿರ್ ಯೂಸುಫ್
|

Updated on: Jul 03, 2025 | 7:53 AM

Share

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 87 ರನ್ ಬಾರಿಸಿದರೆ, ಶುಭ್​ಮನ್ ಗಿಲ್ (114) ಅಜೇಯ ಶತಕ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 310 ರನ್ ಗಳಿಸಿದೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ್ದ ರಿಷಭ್ ಪಂತ್ ದ್ವಿತೀಯ ಪಂದ್ಯದಲ್ಲಿ ಎರಡಂಕಿ ಮೊತ್ತಗಳಿಸಿ ಔಟಾಗಿದ್ದಾರೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ ಭರ್ಜರಿ ಹೊಡೆತಕ್ಕೆ ಮುಂದಾಗಿ ಶೊಯೆಬ್ ಬಶೀರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

ಹೀಗೆ ಕೇವಲ 25 ರನ್​ಗಳಿಸಿ ಪೆವಿಲಿಯನ್​ಗೆ ಹಿಂತಿರುಗಿದ ರಿಷಭ್ ಪಂತ್ ಡ್ರೆಸ್ಸಿಂಗ್​ ರೂಮ್​ನಲ್ಲಿ ತಮ್ಮ ಕೋಪ-ತಾಪವನ್ನು ಪ್ರದರ್ಶಿಸಿದರು. ಸುಖಾಸುಮ್ಮನೆ ವಿಕೆಟ್ ಕೈಚೆಲ್ಲಿದ ಆಕ್ರೋಶದಲ್ಲಿದ್ದ ಪಂತ್ ಡ್ರೆಸ್ಸಿಂಗ್​ ರೂಮ್​ನಲ್ಲಿ ತಮ್ಮ ಹೆಲ್ಮೆಟ್ ಎಸೆಯುವ ಮೂಲಕ ಆಕ್ರೋಶವನ್ನು ಹೊರಹಾಕಿದರು. ಇದೀಗ ಪಂತ್ ಅವರ ಈ ಆಕ್ರೋಶಭರಿತ ವಿಡಿಯೋ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 87 ರನ್ ಬಾರಿಸಿದರೆ, ಶುಭ್​ಮನ್ ಗಿಲ್ (114) ಅಜೇಯ ಶತಕ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 310 ರನ್ ಗಳಿಸಿದೆ. ಸದ್ಯ ಕ್ರೀಸ್​ನಲ್ಲಿ ಶುಭ್​ಮನ್ ಗಿಲ್ (114) ಹಾಗೂ ರವೀಂದ್ರ ಜಡೇಜಾ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.