VIDEO: ಕಣ್ಣೀರಿನೊಂದಿಗೆ ಸಂಭ್ರಮಿಸಿದ ಗೌತಮ್ ಗಂಭೀರ್
India vs England: ಓವಲ್ ಮೈದಾನದಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 224 ರನ್ಗಳಿಸಿದರೆ, ಇಂಗ್ಲೆಂಡ್ 247 ರನ್ಗಳಿಸಿ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಭಾರತ ತಂಡ 396 ರನ್ ಕಲೆಹಾಕಿದ್ದರು. ಇತ್ತ ಮೊದಲ ಇನಿಂಗ್ಸ್ನಲ್ಲಿನ 23 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 374 ರನ್ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 367 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 6 ರನ್ಗಳ ರೋಚಕ ಜಯ ಸಾಧಿಸಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. ಈ ಪಂದ್ಯದ ಐದನೇ ದಿನದಾಟದಲ್ಲಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 35 ರನ್ಗಳ ಅವಶ್ಯಕತೆಯಿತ್ತು. ಇದೇ ವೇಳೆ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ನಲ್ಲಿ ಕೋಚಿಂಗ್ ಸಿಬ್ಬಂದಿಗಳ ಕುತೂಹಲ ಹೇಗಿತ್ತು ಎಂಬುದರ ವಿಡಿಯೋ ಝಲಕ್ ಅನ್ನು ಬಿಸಿಸಿಐ ಬಿಡುಗಡೆ ಮಾಡಿದೆ.
ಈ ವಿಡಿಯೋದಲ್ಲಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಸಂಭ್ರಮವನ್ನು ನೋಡಬಹುದು. ಅದರಲ್ಲೂ ಭಾರತ ತಂಡ ಗೆಲ್ಲುತ್ತಿದ್ದಂತೆ ಭಾವುಕರಾದ ಗಂಭೀರ್ ಕಣ್ಣೀರಿನೊಂದಿಗೆ ಸಹ ಸಿಬ್ಬಂದಿಗಳನ್ನು ತಬ್ಬಿಕೊಳ್ಳುತ್ತಾ ಸಂಭ್ರಮಿಸಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು, ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಓವಲ್ ಮೈದಾನದಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 224 ರನ್ಗಳಿಸಿದರೆ, ಇಂಗ್ಲೆಂಡ್ 247 ರನ್ಗಳಿಸಿ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಭಾರತ ತಂಡ 396 ರನ್ ಕಲೆಹಾಕಿದ್ದರು. ಇತ್ತ ಮೊದಲ ಇನಿಂಗ್ಸ್ನಲ್ಲಿನ 23 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 374 ರನ್ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 367 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 6 ರನ್ಗಳ ರೋಚಕ ಜಯ ಸಾಧಿಸಿದೆ.
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

