AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 2928 ದಿನಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್; ವಿಡಿಯೋ ನೋಡಿ

IND vs ENG: 2928 ದಿನಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್; ವಿಡಿಯೋ ನೋಡಿ

ಪೃಥ್ವಿಶಂಕರ
|

Updated on: Jul 23, 2025 | 9:21 PM

Share

Liam Dawson's 8-Year Test Return: ಮ್ಯಾಂಚೆಸ್ಟರ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದೆ. ಅಲ್ಲದೆ ಗಾಯಗೊಂಡ ಶೊಯೆಬ್ ಬಶೀರ್ ಬದಲಿಗೆ ಲಿಯಾಮ್ ಡಾಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಡಾಸನ್ 8 ವರ್ಷಗಳ ನಂತರ ಟೆಸ್ಟ್ ತಂಡಕ್ಕೆ ಮರಳಿದ್ದು, ತಮ್ಮ 7ನೇ ಎಸೆತದಲ್ಲಿಯೇ ಜೈಸ್ವಾಲ್ ಅವರ ವಿಕೆಟ್ ಪಡೆದು ಅದ್ಭುತ ಪ್ರದರ್ಶನ ನೀಡಿದ್ದಾರೆ.

ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಮೊದಲು ಬೌಲಿಂಗ್ ಮಾಡುತ್ತಿದೆ. ಇದರ ಜೊತೆಗೆ ಈ ಪಂದ್ಯಕ್ಕೆ ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಲಾರ್ಡ್ಸ್‌ ಟೆಸ್ಟ್ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ಸ್ಪಿನ್ನರ್ ಶೊಯೆಬ್ ಬಶೀರ್ ಬದಲಿಗೆ ಎಡಗೈ ಸ್ಪಿನ್ನರ್ ಲಿಯಾಮ್ ಡಾಸನ್‌ ಅವರಿಗೆ ಅವಕಾಶ ನೀಡಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಡಾಸನ್ 3000 ದಿನಗಳ ನಂತರ ಅಂದರೆ 8 ವರ್ಷಗಳ ನಂತರ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದು, ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ಲಿಯಾಮ್ ಡಾಸನ್ ತಮ್ಮ 7ನೇ ಎಸೆತದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಉರುಳಿಸಿದ್ದಾರೆ. 58 ರನ್ ಬಾರಿಸಿ ಅಪಾಯಕಾರಿಯಾಗಿ ಕಾಣುತ್ತಿದ್ದ ಜೈಸ್ವಾಲ್​ರನ್ನು ಪೆವಿಲಿಯನ್​ಗಟ್ಟುವಲ್ಲಿ ಡಾಸನ್ ಯಶಸ್ವಿಯಾದರು.

8 ವರ್ಷಗಳ ನಂತರ ಅವಕಾಶ

ಲಿಯಾಮ್ ಡಾಸನ್ 8 ವರ್ಷಗಳ ನಂತರ ಇಂಗ್ಲೆಂಡ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕೊನೆಯದಾಗಿ ಅಂದರೆ 2017 ರಲ್ಲಿ ಇದೇ ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಿದ್ದರು. ಆದರೆ ಆ ನಂತರ ಅವರನ್ನು ಇಂಗ್ಲೆಂಡ್ ತಂಡದಿಂದ ಕೈಬಿಡಲಾಗಿತ್ತು. ಇದೀಗ ಅದೇ ಟೀಂ ಇಂಡಿಯಾ ವಿರುದ್ಧ ಡಾಸನ್​ಗೆ ಆಡುವ ಅವಕಾಶ ಸಿಕ್ಕಿದೆ.

ಡಾಸನ್‌ ಪ್ರದರ್ಶನ

ಲಿಯಾಮ್ ಡಾಸನ್ ಇಂಗ್ಲೆಂಡ್‌ನ ದೇಶೀಯ ಕ್ರಿಕೆಟ್‌ನಲ್ಲಿ ಬಹಳ ಜನಪ್ರಿಯ ಕ್ರಿಕೆಟಿಗ. 35 ವರ್ಷದ ಲಿಯಾಮ್ ಡಾಸನ್ ಇದುವರೆಗೆ 212 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 371 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದಲ್ಲದೆ, ಅವರು 10731 ರನ್‌ಗಳನ್ನು ಸಹ ಬಾರಿಸಿದ್ದಾರೆ. ಇದರಲ್ಲಿ 18 ಶತಕಗಳು ಸೇರಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ