AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಆಂಗ್ಲರ ಲೆಕ್ಕಾಚಾರವನ್ನು ಉಲ್ಟಾ ಪಲ್ಟಾ ಮಾಡಿ ಪಲ್ಟಿ ಹೊಡೆದ ಪಂತ್; ವಿಡಿಯೋ ನೋಡಿ

IND vs ENG: ಆಂಗ್ಲರ ಲೆಕ್ಕಾಚಾರವನ್ನು ಉಲ್ಟಾ ಪಲ್ಟಾ ಮಾಡಿ ಪಲ್ಟಿ ಹೊಡೆದ ಪಂತ್; ವಿಡಿಯೋ ನೋಡಿ

ಪೃಥ್ವಿಶಂಕರ
|

Updated on:Jun 21, 2025 | 5:30 PM

Share

Rishabh Pant trademark celebration: ಲೀಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಅವರು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ತಮ್ಮ 7ನೇ ಟೆಸ್ಟ್ ಶತಕ ಸಿಡಿಸಿದ್ದಾರೆ. ಉಪನಾಯಕನಾಗಿ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ಪಂತ್, ಶೋಯೆಬ್ ಬಶೀರ್ ಬೌಲಿಂಗ್‌ನಲ್ಲಿ ಸಿಕ್ಸರ್‌ ಮೂಲಕ ಶತಕ ಪೂರ್ಣಗೊಳಿಸಿ, ಮೈದಾನದಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಮತ್ತೊಮ್ಮೆ ತಮ್ಮ ಅದ್ಭುತ ಬ್ಯಾಟಿಂಗ್ ಪರಾಕ್ರಮವನ್ನು ತೋರಿಸಿದ್ದಾರೆ. ಉಪನಾಯಕತ್ವವಹಿಸಿಕೊಂಡ ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಮಾಡುತ್ತಿರುವ ಪಂತ್, ತಮ್ಮ ಟೆಸ್ಟ್ ವೃತ್ತಿಜೀವನದ 7ನೇ ಶತಕವನ್ನು ಪೂರೈಸುವ ಮೂಲಕ ಭಾರತವನ್ನು ಬಲಿಷ್ಠ ಸ್ಥಾನಕ್ಕೆ ತಂದಿದ್ದಾರೆ. ಇಂಗ್ಲೆಂಡ್‌ ಸ್ಪಿನ್ನರ್ ಶೋಯೆಬ್ ಬಶೀರ್ ಬೌಲಿಂಗ್​ನಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಶತಕ ಪೂರೈಸಿದ ಪಂತ್, ಆ ಬಳಿಕ ಮೈದಾನದಲ್ಲಿ ಪಲ್ಟಿ ಹೊಡೆಯುವ ಮೂಲಕ ತಮ್ಮ ಶತಕವನ್ನು ಸಂಭ್ರಮಿಸಿದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 21, 2025 05:27 PM