Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸರ್ ಸಿಡಿಸಿ ಶತಕ ಪೂರೈಸಿದ ರೋಹಿತ್ ಶರ್ಮಾ ಸಂಭ್ರಮಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಸಿಕ್ಸರ್ ಸಿಡಿಸಿ ಶತಕ ಪೂರೈಸಿದ ರೋಹಿತ್ ಶರ್ಮಾ ಸಂಭ್ರಮಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಪೃಥ್ವಿಶಂಕರ
|

Updated on: Feb 10, 2025 | 8:21 PM

Rohit Sharma's century: ಕಟಕ್ ಮೈದಾನದಲ್ಲಿ ಆಂಗ್ಲ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ರೋಹಿತ್ ಶರ್ಮಾ ಕೇವಲ 76 ಎಸೆತಗಳ ಸ್ಫೋಟಕ ಶತಕ ಸಿಡಿಸಿದರು. ಅಂತಿಮವಾಗಿ ತಮ್ಮ ಇನ್ನಿಂಗ್ಸ್​ನಲ್ಲಿ 90 ಎಸೆತಗಳನ್ನು ಎದುರಿಸಿದ ರೋಹಿತ್ 12 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್‌ಗಳ ಸಹಿತ 119 ರನ್‌ಗಳ ಇನ್ನಿಂಗ್ಸ್ ಆಡಿದರು. ಅದರಲ್ಲೂ ರೋಹಿತ್ ಸಿಕ್ಸರ್ ಸಿಡಿಸಿ ತಮ್ಮ ಶತಕ ಪೂರೈಸಿದ್ದು, ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿತು.

ಭಾರತ ಮತ್ತು ಇಂಗ್ಲೆಂಡ್‌ ನಡುವೆ ಕಟಕ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಭಾರತ ತಂಡದ ಗೆಲುವಿಗಿಂತ ಹೆಚ್ಚಾಗಿ ರೋಹಿತ್ ಶರ್ಮಾ ಶತಕ ಸಿಡಿಸಿದ್ದು, ಟೀಂ ಇಂಡಿಯಾ ಅಭಿಮಾನಿಗಳಿಗೆ ಹೆಚ್ಚಿನ ಖುಷಿ ನೀಡಿದೆ. ಕಟಕ್ ಮೈದಾನದಲ್ಲಿ ಆಂಗ್ಲ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ರೋಹಿತ್ ಶರ್ಮಾ ಕೇವಲ 76 ಎಸೆತಗಳ ಸ್ಫೋಟಕ ಶತಕ ಸಿಡಿಸಿದರು. ಅಂತಿಮವಾಗಿ ತಮ್ಮ ಇನ್ನಿಂಗ್ಸ್​ನಲ್ಲಿ 90 ಎಸೆತಗಳನ್ನು ಎದುರಿಸಿದ ರೋಹಿತ್ 12 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್‌ಗಳ ಸಹಿತ 119 ರನ್‌ಗಳ ಇನ್ನಿಂಗ್ಸ್ ಆಡಿದರು. ಅದರಲ್ಲೂ ರೋಹಿತ್ ಸಿಕ್ಸರ್ ಸಿಡಿಸಿ ತಮ್ಮ ಶತಕ ಪೂರೈಸಿದ್ದು, ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿತು.

ಇಂಗ್ಲೆಂಡ್ ನೀಡಿದ್ದ 305 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಶುಭ್​ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಮೊದಲ ವಿಕೆಟ್‌ಗೆ 136 ರನ್‌ಗಳ ಜೊತೆಯಾಟ ನೀಡಿದರು. ತಮ್ಮ ಈ ಶತಕದ ಇನ್ನಿಂಗ್ಸ್​ನಲ್ಲಿ ರೋಹಿತ್ ಹಲವು ದಾಖಲೆಗಳನ್ನು ಪುಡಿಗಟ್ಟಿದರು. ಅದರಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದೊಡ್ಡ ದಾಖಲೆಯೂ ಸೇರಿತ್ತು. ಇದೀಗ ರೋಹಿತ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಈ ವಿಷಯದಲ್ಲಿ ಅವರು ಸಚಿನ್‌ರನ್ನು ಹಿಂದಿಕ್ಕಿದ್ದಾರೆ. ಸಚಿನ್ ಆರಂಭಿಕನಾಗಿ 15,335 ರನ್ ಗಳಿಸಿದ್ದರೆ, ರೋಹಿತ್ ಈಗ 15,404 ರನ್ ಗಳಿಸಿದ್ದಾರೆ.