ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಅಭಿಮಾನಿಗಳು: ವೈರಲ್ ಆಗುತ್ತಿದೆ ವಿಡಿಯೋ
Vande Mataram in Chinnaswamy Stadium: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳು 'ವಂದೇ ಮಾತರಂ' ಹಾಡು ಹಾಡಿದ್ದು ವಿಶೇಷವಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳು ಜನಪ್ರಿಯ ದೇಶಭಕ್ತಿ ಗೀತೆಯನ್ನು ಹಾಡಿದ್ದಾರೆ.
ನವೆಂಬರ್ 12 ರಂದು ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 160 ರನ್ಗಳ ಭರ್ಜರಿ ಜಯ ಸಾಧಿಸಿ ತನ್ನ ಗೆಲುವಿನ ನಾಗಲೋಟವನ್ನು ಮುಂದುವರೆಸಿತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಮ್ಯಾಚ್ನಲ್ಲಿ ಭಾರತೀಯ ಬ್ಯಾಟರ್ಗಳು ರನ್ ಮಳೆ ಸುರಿಸಿದರು. ಪಂದ್ಯ ವೀಕ್ಷಿಸಲು ಬಂದಿದ್ದ ಅಭಿಮಾನಿಗಳಿಗೆ ರಸದೌತಣ ನೀಡಿದರು. ಇದರ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳು ‘ವಂದೇ ಮಾತರಂ’ ಹಾಡು ಹಾಡಿದ್ದು ವಿಶೇಷವಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳು ಜನಪ್ರಿಯ ದೇಶಭಕ್ತಿ ಗೀತೆಯನ್ನು ಹಾಡಿದ್ದಾರೆ. ಅಭಿಮಾನಿಗಳು ಹಾಡಿದ ಸದ್ದಿಗೆ ಇಡೀ ಕ್ರೀಡಾಂಗಣವೇ ಪ್ರತಿಧ್ವನಿಸಿತು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:44 am, Mon, 13 November 23