AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 21 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಇಶಾನ್ ಕಿಶನ್

IND vs NZ: 21 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಇಶಾನ್ ಕಿಶನ್

ಪೃಥ್ವಿಶಂಕರ
|

Updated on: Jan 23, 2026 | 10:55 PM

Share

Ishan Kishan's Record 21-Ball Fifty: ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕೇವಲ 21 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದರು. ಭಾರತೀಯ ಬ್ಯಾಟ್ಸ್‌ಮನ್ ನ್ಯೂಜಿಲೆಂಡ್ ವಿರುದ್ಧ ಗಳಿಸಿದ ಅತ್ಯಂತ ವೇಗದ ಅರ್ಧಶತಕ ಇದಾಗಿದೆ. 76 ರನ್ ಗಳಿಸಿದ ಅವರ ಸ್ಫೋಟಕ ಇನ್ನಿಂಗ್ಸ್ ಭಾರತ ತಂಡಕ್ಕೆ 208 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟಲು ನೆರವಾಯಿತು, ತಂಡಕ್ಕೆ ಐದು ಪಂದ್ಯಗಳ ಸರಣಿಯಲ್ಲಿ ಗೆಲುವು ತಂದುಕೊಟ್ಟಿತು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವನ್ನು ಖಚಿತಪಡಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಗಳಿಸಿತು. ಟೀಂ ಇಂಡಿಯಾ 15.2 ಓವರ್​ಗಳಲ್ಲಿ ಗುರಿ ಮುಟ್ಟಿತು. ತಂಡದ ಪರ ಇಶಾನ್ ಕಿಶನ್ ಅಬ್ಬರದ ಇನ್ನಿಂಗ್ಸ್ ಆಡಿ ಕೇವಲ 32 ಎಸೆತಗಳಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಿತ 237.50 ರ ಸ್ಟ್ರೈಕ್ ರೇಟ್​ನಲ್ಲಿ 76 ರನ್ ಗಳಿಸಿದರು.

ಈ ಇನ್ನಿಂಗ್ಸ್‌ನಲ್ಲಿ ಇಶಾನ್ ಕಿಶನ್ ಅವರ ಅತ್ಯಂತ ಗಮನಾರ್ಹ ಸಾಧನೆಯೆಂದರೆ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದು. ಇದು ನ್ಯೂಜಿಲೆಂಡ್ ವಿರುದ್ಧ ಭಾರತೀಯ ಬ್ಯಾಟ್ಸ್‌ಮನ್ ಗಳಿಸಿದ ಅತ್ಯಂತ ವೇಗದ ಟಿ20 ಅಂತರರಾಷ್ಟ್ರೀಯ ಅರ್ಧಶತಕವಾಗಿದೆ. ಇದಕ್ಕೂ ಮೊದಲು, ಅಭಿಷೇಕ್ ಶರ್ಮಾ ಸರಣಿಯ ಮೊದಲ ಪಂದ್ಯದಲ್ಲಿ 22 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಈ ದಾಖಲೆಯನ್ನು ನಿರ್ಮಿಸಿದ್ದರು, ಆದರೆ ಇಶಾನ್ ಕೇವಲ 48 ಗಂಟೆಗಳಲ್ಲಿ ಅದನ್ನು ಮುರಿದರು. ಎರಡು ವರ್ಷಗಳ ನಂತರ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದರಿಂದ ಈ ಪ್ರದರ್ಶನ ಇಶಾನ್‌ಗೆ ಇನ್ನಷ್ಟು ವಿಶೇಷವಾಗಿದೆ.

ತಂಡವು ಆರಂಭಿಕ ಆಟಗಾರರಿಬ್ಬರನ್ನೂ ಬೇಗನೆ ಕಳೆದುಕೊಂಡಿದ್ದರಿಂದ ಇಶಾನ್ ಕಿಶನ್ ಅವರ ಇನ್ನಿಂಗ್ಸ್ ಕೂಡ ವಿಶೇಷವಾಗಿತ್ತು. ಸಂಜು ಸ್ಯಾಮ್ಸನ್ 6 ರನ್ ಗಳಿಸಿ ಔಟಾದರೆ, ಅಭಿಷೇಕ್ ಶರ್ಮಾ ರನ್ ಗಳಿಸದೆ ಔಟಾದರು. ಬಂದ ಕೂಡಲೇ ಕಿಶನ್ ವೇಗವಾಗಿ ರನ್ ಗಳಿಸಿದರು. ಇಶಾನ್ ಕಿಶನ್ ಔಟಾದಾಗ, ತಂಡದ ಸ್ಕೋರ್ 9.1 ಓವರ್‌ಗಳಲ್ಲಿ 128 ರನ್ ಆಗಿತ್ತು.