IND vs NZ, ICC World Cup: ಧರ್ಮಶಾಲಾ ಸ್ಟೇಡಿಯಂನಲ್ಲಿ ಶಮಿ… ಶಮಿ… ಕೂಗು: ವಿಡಿಯೋ ನೋಡಿ
Mohammed Shami, India vs New Zealand: ಇದೇ ಮೊದಲ ಬಾರಿಗೆ ವಿಶ್ವಕಪ್ 2023 ರಲ್ಲಿ ಕಣಕ್ಕಿಳಿದ ಮೊಹಮ್ಮದ್ ಶಮಿ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತರು. ಧರ್ಮಶಾಲಾದಲ್ಲಿ ಶಮಿಗೆ ಅದ್ಭುತ ಬೆಂಬಲ ಸಿಕ್ಕಿತು. ಅಭಿಮಾನಿಗಳು ಶಮಿ.. ಶಮಿ.. ಎಂದು ಕೂಗುತ್ತಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ (ICC World Cup) ಭಾರತ ಕ್ರಿಕೆಟ್ ತಂಡದ ಗೆಲುವಿನ ನಾಗಲೋಟ ಮುಂದುವರೆದಿದೆ. ಭಾನುವಾರ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ಜಯ ಸಾಧಿಸಿತು. ಭಾರತ ಪರ ಬೌಲಿಂಗ್ನಲ್ಲಿ ಮೊಹಮ್ಮದ್ ಶಮಿ 5 ವಿಕೆಟ್ ಕಿತ್ತು ಮಿಂಚಿದರೆ, ವಿರಾಟ್ ಕೊಹ್ಲಿ 95 ರನ್ ಸಿಡಿಸಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದರು. ಇದೇ ಮೊದಲ ಬಾರಿಗೆ ವಿಶ್ವಕಪ್ 2023 ರಲ್ಲಿ ಕಣಕ್ಕಿಳಿದ ಶಮಿ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತರು. ಅಲ್ಲದೆ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಎರಡನೇ ಬಾರಿಗೆ ಐದು ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎನಿಸಿಕೊಂಡರು. ಧರ್ಮಶಾಲಾದಲ್ಲಿ ಶಮಿಗೆ ಅದ್ಭುತ ಬೆಂಬಲ ಸಿಕ್ಕಿತು. ಅಭಿಮಾನಿಗಳು ಶಮಿ.. ಶಮಿ.. ಎಂದು ಕೂಗುತ್ತಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 23, 2023 11:11 AM