VIDEO: ಬದ್ಧ ವೈರಿಗಳ ಕದನ… ಹಾರಿಸ್ ರೌಫ್ಗೆ ಚಳಿ ಬಿಡಿಸಿದ ಅಭಿಷೇಕ್ ಶರ್ಮಾ
India vs Pakistan 2025: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 18.5 ಓವರ್‌ಗಳಲ್ಲಿ ಚೇಸ್ ಮಾಡಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಏಷ್ಯಾ ಕಪ್‌ನ ಸೂಪರ್-4 ಹಂತದ ಪಂದ್ಯದಲ್ಲೂ ಪಾಕಿಸ್ತಾನ್ ತಂಡವನ್ನು ಟೀಮ್ ಇಂಡಿಯಾ ಬಗ್ಗು ಬಡಿದಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯವು ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅದರಲ್ಲೂ ಉಭಯ ತಂಡಗಳ ಆಟಗಾರರು ಪರಸ್ಪರ ಮಾತಿನ ಚಕಮಕಿಯಲ್ಲಿ ನಡೆಸಿದ್ದರು. ಮೊದಲಿಗೆ ಶುಭ್ಮನ್ ಗಿಲ್ ಹಾಗೂ ಶಾಹೀನ್ ಅಫ್ರಿದಿ ನಡುವೆ ವಾಕ್ಸಮರ ನಡೆದರೆ, ಆ ಬಳಿಕ ಹಾರಿಸ್ ರೌಫ್ ಹಾಗೂ ಅಭಿಷೇಕ್ ಶರ್ಮಾ ವಾಗ್ಯುದ್ದ ನಡೆಸಿದರು.
ಹಾರಿಸ್ ರೌಫ್ ಎಸೆದ 5ನೇ ಓವರ್‌ನ ಕೊನೆಯ ಎಸೆತದಲ್ಲಿ ಶುಭ್ಮನ್ ಗಿಲ್ ಆಕರ್ಷಕ ಬೌಂಡರಿ ಬಾರಿಸಿದ್ದರು. ಇದೇ ವೇಳೆ ನಾನ್ ಸ್ಟ್ರೈಕ್ ನಲ್ಲಿದ್ದ ಅಭಿಷೇಕ್ ಶರ್ಮಾ ಅದೇನೊ ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಹಾರಿಸ್ ರೌಫ್, ಅಭಿಷೇಕ್ ಶರ್ಮಾ ಜೊತೆ ಮಾತಿನ ಚಕಮಕಿಗೆ ಇಳಿದರು.
ಪಿಚ್ನಲ್ಲಿ ಇಬ್ಬರ ವಾಕ್ಸಮರ ತಾರಕಕ್ಕೇರುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಅಂಪೈರ್ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಇದೀಗ ಅಭಿಷೇಕ್ ಶರ್ಮಾ-ಹಾರಿಸ್ ರೌಫ್ ನಡುವಣ ವಾಕ್ಸಮರದ ವಿಡಿಯೋ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 18.5 ಓವರ್‌ಗಳಲ್ಲಿ ಚೇಸ್ ಮಾಡಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

