IND vs PAK: ಏಷ್ಯಾಕಪ್​ ಫೈನಲಲ್ಲಿ ಪಾಕ್​ ವಿರುದ್ಧ ಭಾರತಕ್ಕೆ ಜಯ, ಕೊಪ್ಪಳದಲ್ಲಿ ಯುವಕ-ಯುವತಿಯರ ಸಂಭ್ರಮ, ಭರ್ಜರಿ ಡ್ಯಾನ್ಸ್

Updated on: Sep 29, 2025 | 10:10 AM

IND vs PAK Asia Cup 2025 Final: ಏಷ್ಯಾಕಪ್ 2025ರ ಫೈನಲ್​​ನಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದ ಟೀಮ್ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾರತದ ಗೆಲುವನ್ನು ಕರ್ನಾಟಕದಾದ್ಯಂತ ಅಭಿಮಾನಿಗಳು ಸಂಭ್ರಮಿಸಿದ್ದು, ಕೊಪ್ಪಳದಲ್ಲಿ ಯುವತಿಯರು ಡ್ಯಾನ್ಸ್ ಮಾಡಿ ಸಂಭ್ರಮಿಸಿದರು. ಸಂಭ್ರಮಾಚರಣೆಯ ವಿಡಿಯೋ ಇಲ್ಲಿದೆ.

ಕೊಪ್ಪಳ, ಸೆಪ್ಟೆಂಬರ್ 29: ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಟೀಮ್ ಇಂಡಿಯಾ ಮೂರನೇ ಬಾರಿಗೆ ಟೂರ್ನಿಯನ್ನು ತನ್ನದಾಗಿಸಿಕೊಂಡಿದೆ. ಬದ್ಧ ವೈರಿ ಪಾಕಿಸ್ತಾನವನ್ನು ಲೀಗ್ ಹಂತದ ಪದ್ಯಗಳಲ್ಲಿ 2 ಬಾರಿ ಏಕಪಕ್ಷೀಯವಾಗಿ ಸೋಲಿಸಿದ್ದ ಟೀಮ್ ಇಂಡಿಯಾ ಫೈನಲ್​ನಲ್ಲಿ ರೋಚಕವಾಗಿ ಸೆಣಸಿ ಜಯ ತನ್ನದಾಗಿಸಿತು. ಕರ್ನಾಟಕದಲ್ಲಿಯೂ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದ್ದು, ಕೊಪ್ಪಳದಲ್ಲಿ ಯವತಿಯರು ಭರ್ಜರಿ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More