IND vs PAK: ಮೈದಾನದಲ್ಲಿ ಸ್ಪ್ರೇ ಹೊಡೆದ ಪಾಕಿಸ್ತಾನ್ ತಂಡದ ನಾಯಕಿ
India Women vs Pakistan Women: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 247 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 43 ಓವರ್ಗಳಲ್ಲಿ 159 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 88 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಮಹಿಳಾ ಏಕದಿನ ವಿಶ್ವಕಪ್ನ 6ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿದ್ದವು. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯಕ್ಕೆ ಕೀಟಗಳು ಅಡ್ಡಿಪಡಿಸಿದ್ದವು. ಹೀಗಾಗಿ ಕೆಲ ಕ್ಷಣಗಳ ಕಾಲ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.
ಇದರ ನಡುವೆ ಪಾಕಿಸ್ತಾನ್ ತಂಡದ ನಾಯಕಿ ಫಾತಿಮಾ ಸನಾ ಬಗ್ ಸ್ಪ್ರೇ ಸಿಂಪಡಿಸುವ ಮೂಲಕ ಕೀಟಗಳನ್ನು ಓಡಿಸಲು ಯತ್ನಿಸಿದರು. ಇದೀಗ ಸನಾ ಸ್ಪ್ರೇ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 247 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 43 ಓವರ್ಗಳಲ್ಲಿ 159 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 88 ರನ್ಗಳ ಭರ್ಜರಿ ಜಯ ಸಾಧಿಸಿದೆ.
Published on: Oct 06, 2025 07:53 AM

