VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ… ವಾರ್ನಿಂಗ್!
India A vs Pakistan A: ರೈಸಿಂಗ್ ಸ್ಟಾರ್ ಏಷ್ಯಾಕಪ್ ಟೂರ್ನಿಯ 6ನೇ ಪಂದ್ಯದಲ್ಲಿ ಪಾಕಿಸ್ತಾನ್ ಎ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 19 ಓವರ್ಗಳಲ್ಲಿ 136 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು 13.2 ಓವರ್ಗಳಲ್ಲಿ ಚೇಸ್ ಮಾಡಿ ಪಾಕಿಸ್ತಾನ್ ಎ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ದೋಹಾದಲ್ಲಿ ನಡೆದ ಭಾರತ ಎ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ಎ ತಂಡದ ಆಟಗಾರ ಸಾದ್ ಮಸೂದ್ ಆಕ್ರಮಣಕಾರಿ ವರ್ತನೆ ತೋರಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ನಮನ್ ಧೀರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.
ಬಿರುಸಿನ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದ ನಮನ್ ಕೇವಲ 19 ಎಸತೆಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 35 ರನ್ ಬಾರಿಸಿದ್ದರು. ಈ ವೇಳೆ ದಾಳಿಗಿಳಿದ ಸಾದ್ ಮಸೂದ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಫ್ರಂಟ್ ಫೀಲ್ಡರ್ಗೆ ಕ್ಯಾಚ್ ನೀಡಿದರು.
ಇತ್ತ ಡೇಂಜರಸ್ ನಮನ್ ಧೀರ್ ವಿಕೆಟ್ ಸಿಗುತ್ತಿದ್ದಂತೆ ಸಾದ್ ಮಸೂದ್ ದಾಟು ಎನ್ನುವಂತೆ ಕೈ ಸನ್ನೆ ಮಾಡಿ ಆಕ್ರಮಣಕಾರಿ ವರ್ತನೆ ತೋರಿದರು. ಇದರಿಂದ ಕುಪಿತಗೊಂಡ ನಮನ್ ಧೀರ್ ಕೂಡ ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಾ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.
ಸಾದ್ ಮಸೂದ್ ಅವರ ಈ ದುರ್ವತನೆಯನ್ನು ಗಮನಿಸಿದ ಫೀಲ್ಡ್ ಅಂಪೈರ್ ಮೊದಲ ಎಚ್ಚರಿಕೆ ನೀಡುತ್ತಾ, ಇಂತಹ ಆಕ್ರಮಣಕಾರಿ ವರ್ತನೆಯನ್ನು ಪುನರಾವರ್ತಿಸದಂತೆ ವಾರ್ನಿಂಗ್ ನೀಡಿದರು. ಇದೀಗ ಪಾಕಿಸ್ತಾನ್ ತಂಡದ ಯುವ ಆಟಗಾರನ ಆಕ್ರಮಣಕಾರಿ ವರ್ತನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 19 ಓವರ್ಗಳಲ್ಲಿ 136 ರನ್ಗಳಿಸಿ ಆಲೌಟ್ ಆಗಿದೆ. ಈ ಗುರಿಯನ್ನು 13.2 ಓವರ್ಗಳಲ್ಲಿ ಚೇಸ್ ಮಾಡಿ ಪಾಕಿಸ್ತಾನ್ ಎ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.