IND vs PAK: ಇಂದಿನ ಹೈವೋಲ್ಟೇಜ್ ಭಾರತ-ಪಾಕ್ ಪಂದ್ಯಕ್ಕೆ ಪಹಲ್ಗಾಮ್ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದೇಕೆ?

Updated on: Sep 14, 2025 | 9:46 AM

ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯದ ಟಿಕೆಟ್​ಗಳು ಅನ್​ಸೋಲ್ಡ್ ಆಗಿವೆ. ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಬಿಸಿಸಿಐ ನಡೆಗೆ ಪಹಲ್ಗಾಮ್​ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಮೃತಪಟ್ಟ 26 ಕುಟುಂಬಗಳ ಮೇಲೆ ಭಾವನಗಳೇ ಇಲ್ವಾ ಎಂದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 14: ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ತಂಡಗಳು ಇಂದು ಮುಖಾಮುಖಿಯಾಗುತ್ತಿವೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹೈವೋಲ್ಟೆಜ್ ಕದನ ನಡೆಯಲಿದೆ. ಏಷ್ಯಾಕಪ್​ನಲ್ಲಿ ತಲಾ ಒಂದು ಪಂದ್ಯ ಗೆದ್ದಿರುವ ಉಭಯ ತಂಡಗಳು ಗೆಲ್ಲುವ ನಿರೀಕ್ಷೆಯಲ್ಲಿವೆ. ಈ ಮಧ್ಯೆ ಪಂದ್ಯ ಬಹಿಷ್ಕಾರಕ್ಕೆ ಆಗ್ರಹ ಕೇಳಿಬಂದಿದೆ. ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಶುಭಂ ದ್ವಿವೇದಿ ಪತ್ನಿ ಐಶಾನ್ಯ ಬಿಸಿಸಿಐ ವಿರುದ್ಧ ಕಿಡಿಕಾರಿದ್ಧಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಮೃತಪಟ್ಟ 26 ಕುಟುಂಬಗಳ ಮೇಲೆ ಭಾವನಗಳೇ ಇಲ್ವಾ. ಪಂದ್ಯ ಬಹಿಷ್ಕರಿಸಿ ಎಂದು ಕರೆಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.