VIDEO: ಸಿರಾಜ್ ಮಾರಕ ಎಸೆತಕ್ಕೆ ಸ್ಟಂಪ್ ಪೀಸ್ ಪೀಸ್..!
India vs South Africa, 1st Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಮುಗಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 159 ರನ್ಗಳಿಸಿದರೆ, ಟೀಮ್ ಇಂಡಿಯಾ 189 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ ಪ್ರಥಮ ಇನಿಂಗ್ಸ್ನಲ್ಲಿ ಕೇವಲ 30 ರನ್ಗಳ ಮುನ್ನಡೆ ಪಡೆದುಕೊಂಡಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡ 159 ರನ್ಗಳಿಸಿದರೆ, ಭಾರತ ತಂಡ 189 ರನ್ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಬೌಲರ್ಗಳು 153 ರನ್ಗಳಿಗೆ ಆಲೌಟ್ ಮಾಡಿದೆ.
ಈ ವೇಳೆ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 2 ಓವರ್ಗಳಲ್ಲಿ 2 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಅದರಲ್ಲೂ ಸೈಮನ್ ಹಾರ್ಮರ್ಗೆ ಎಸೆದ ಚೆಂಡಿಗೆ ಆಫ್ ಸ್ಟಂಪ್ ಮುರಿದು ಬಿತ್ತು. ಇದೀಗ ಮೊಹಮ್ಮದ್ ಸಿರಾಜ್ ಅವರ ಬೆಂಕಿ ಬೌಲಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸದ್ಯ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಭೋಜನಾ ವಿರಾಮದ ವೇಳೆಗೆ 2 ವಿಕೆಟ್ ಕಳೆದುಕೊಂಡು 10 ರನ್ ಕಲೆಹಾಕಿದೆ. ಅಲ್ಲದೆ ಈ ಪಂದ್ಯದಲ್ಲಿ ಗೆಲುವು ದಾಖಲಿಸಲು ಭಾರತ ತಂಡ ಇನ್ನೂ 114 ರನ್ ಗಳಿಸಬೇಕಿದೆ.

