VIDEO: ಸಿರಾಜ್ ಮಾರಕ ಎಸೆತಕ್ಕೆ ಸ್ಟಂಪ್ ಪೀಸ್ ಪೀಸ್..!

Updated on: Nov 16, 2025 | 11:59 AM

India vs South Africa, 1st Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಮುಗಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 159 ರನ್​ಗಳಿಸಿದರೆ, ಟೀಮ್ ಇಂಡಿಯಾ 189 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 30 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡ 159 ರನ್​ಗಳಿಸಿದರೆ, ಭಾರತ ತಂಡ 189 ರನ್ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಬೌಲರ್​ಗಳು 153 ರನ್​ಗಳಿಗೆ ಆಲೌಟ್ ಮಾಡಿದೆ.

ಈ ವೇಳೆ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 2 ಓವರ್​ಗಳಲ್ಲಿ 2 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಅದರಲ್ಲೂ ಸೈಮನ್ ಹಾರ್ಮರ್​ಗೆ ಎಸೆದ ಚೆಂಡಿಗೆ ಆಫ್ ಸ್ಟಂಪ್ ಮುರಿದು ಬಿತ್ತು. ಇದೀಗ ಮೊಹಮ್ಮದ್ ಸಿರಾಜ್ ಅವರ ಬೆಂಕಿ ಬೌಲಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸದ್ಯ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಭೋಜನಾ ವಿರಾಮದ ವೇಳೆಗೆ 2 ವಿಕೆಟ್ ಕಳೆದುಕೊಂಡು 10 ರನ್​ ಕಲೆಹಾಕಿದೆ. ಅಲ್ಲದೆ ಈ ಪಂದ್ಯದಲ್ಲಿ ಗೆಲುವು ದಾಖಲಿಸಲು ಭಾರತ ತಂಡ ಇನ್ನೂ 114 ರನ್​​ ಗಳಿಸಬೇಕಿದೆ.