IND vs SA: 83ನೇ ಶತಕ ಬಾರಿಸಿ ವಿರಾಟ್ ಕೊಹ್ಲಿ ಸಂಭ್ರಮಿಸಿದ್ದು ಹೇಗೆ ನೋಡಿ

Updated on: Nov 30, 2025 | 5:08 PM

Virat Kohli: ಆಸ್ಟ್ರೇಲಿಯಾ ಸರಣಿಯಲ್ಲಿ ಕಳಪೆ ಪ್ರದರ್ಶನದಿಂದ ಟೀಕೆಗೊಳಗಾಗಿದ್ದ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 52ನೇ ಶತಕ ಸಿಡಿಸಿ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ 102 ಎಸೆತಗಳಲ್ಲಿ ಶತಕ ಪೂರೈಸಿದ ಕೊಹ್ಲಿ, ತಮ್ಮ ಆಕ್ರಮಣಕಾರಿ ಶೈಲಿಯಲ್ಲಿ ಸಂಭ್ರಮಿಸಿದರು. ಬಿಸಿಸಿಐ ಈ ವಿಡಿಯೋವನ್ನು ಹಂಚಿಕೊಂಡಿದೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಸೊನ್ನೆ ಸುತ್ತಿ ಟೀಕೆಗೆ ಗುರಿಯಾಗಿದ್ದ ವಿರಾಟ್ ಕೊಹ್ಲಿ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಶತಕ ಸಿಡಿಸುವ ಮೂಲಕ ಭರ್ಜರಿಯಾಗಿ ಆರಂಭಿಸಿದ್ದಾರೆ. ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 102 ಎಸೆತಗಳಲ್ಲಿ ತಮ್ಮ 52ನೇ ಏಕದಿನ ಶತಕವನ್ನು ಪೂರೈಸಿದರು. 38ನೇ ಓವರ್​ನಲ್ಲಿ ಬೌಂಡರಿ ಬಾರಿಸುವ ಮೂಲಕ ಶತಕ ಪೂರೈಸಿದ ಕೊಹ್ಲಿ ಎಂದಿನಂತೆ ಆಕ್ರಮಣಕಾರಿ ಶೈಲಿಯಲ್ಲಿ ಶತಕವನ್ನು ಸಂಭ್ರಮಿಸಿದರು. ಇದೀಗ ಅದರ ವಿಡಿಯೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

Follow Us
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More