IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಯಾರಿ ಹೇಗಿದೆ? ವಿಡಿಯೋ ನೋಡಿ
IND vs SL: ಕೊಹ್ಲಿ ಹಾಗೂ ರೋಹಿತ್ ಟಿ20 ವಿಶ್ವಕಪ್ ಗೆದ್ದ ಬಳಿಕ ತಂಡದಿಂದ ಹೊರಗುಳಿದಿದ್ದರು. ಆದರೆ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಇಂಜುರಿ ಸಮಸ್ಯೆಯಿಂದಾಗಿ ತಂಡದ ಭಾಗವಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬಹಳ ದಿನಗಳ ನಂತರ ತಂಡಕ್ಕೆ ಮರಳಿರುವ ಆಟಗಾರರು ಹೊಸ ಗುರು ಗೌತಮ್ ಗಂಭೀರ್ ಎದುರಾಗಿ ಬ್ಯಾಟಿಂಗ್ ಅಭ್ಯಾಸ ನಡೆಸಿದರು. ಅದರ ವಿಡಿಯೋವನ್ನು ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಗೆದ್ದಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿ 3-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯ ಸರದಿಯಾಗಿದ್ದು, ಸರಣಿಯ ಮೊದಲ ಪಂದ್ಯ ಆಗಸ್ಟ್ 2 ರಂದು ನಡೆಯಲ್ಲಿದೆ. ಈ ಸರಣಿಯ ಮೂಲಕ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬಹು ದಿನಗಳ ರಜೆಯ ನಂತರ ತಂಡಕ್ಕೆ ಮರಳುತ್ತಿದ್ದಾರೆ. ಇವರಲ್ಲದೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ಸ್ ಅಯ್ಯರ್ ಕೂಡ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲ್ಲಿದ್ದಾರೆ. ಕೊಹ್ಲಿ ಹಾಗೂ ರೋಹಿತ್ ಟಿ20 ವಿಶ್ವಕಪ್ ಗೆದ್ದ ಬಳಿಕ ತಂಡದಿಂದ ಹೊರಗುಳಿದಿದ್ದರು. ಆದರೆ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಇಂಜುರಿ ಸಮಸ್ಯೆಯಿಂದಾಗಿ ತಂಡದ ಭಾಗವಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬಹಳ ದಿನಗಳ ನಂತರ ತಂಡಕ್ಕೆ ಮರಳಿರುವ ಆಟಗಾರರು ಹೊಸ ಗುರು ಗೌತಮ್ ಗಂಭೀರ್ ಎದುರಾಗಿ ಬ್ಯಾಟಿಂಗ್ ಅಭ್ಯಾಸ ನಡೆಸಿದರು. ಅದರ ವಿಡಿಯೋವನ್ನು ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
Published on: Aug 01, 2024 03:30 PM