ಬೆರಳು ಚೀಪಿ ಸಂಭ್ರಮ… ಕೆಎಲ್ ರಾಹುಲ್ ಸೆಲೆಬ್ರೇಷನ್ ಹಿಂದಿದೆ ನಿರ್ದಿಷ್ಟ ಕಾರಣ
India vs West Indies: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 162 ರನ್ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಧ್ರುವ್ ಜುರೆಲ್ (125) ಹಾಗೂ ರವೀಂದ್ರ ಜಡೇಜಾ (104) ಶತಕ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 448 ರನ್ ಕಲೆಹಾಕಿದೆ.
ಬರೋಬ್ಬರಿ 3211 ದಿನಗಳ ಬಳಿಕ ಕೆಎಲ್ ರಾಹುಲ್ ತವರಿನಲ್ಲಿ ಶತಕ ಸಿಡಿಸಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ 197 ಎಸೆತಗಳಲ್ಲಿ 12 ಫೋರ್ಗಳೊಂದಿಗೆ 100 ರನ್ ಬಾರಿಸಿದರು. ಇತ್ತ ಶತಕ ಪೂರೈಸುತ್ತಿದ್ದಂತೆ ಕೆಎಲ್ ರಾಹುಲ್ ಬೆರಳು ಚೀಪುತ್ತಾ ಸಂಭ್ರಮಿಸಿದ್ದರು. ಇಂತಹದೊಂದು ವಿಶೇಷ ಸಂಭ್ರಮಕ್ಕೆ ಕಾರಣ ಅವರ ಮಗಳು.
ಕೆಎಲ್ ರಾಹುಲ್ ಅವರಿಗೆ 7 ತಿಂಗಳ ಮಗಳಿದ್ದಾಳೆ. ಇದೀಗ 9 ವರ್ಷಗಳ ಬಳಿಕ ಭಾರತದ ಪಿಚ್ನಲ್ಲಿ ಬಾರಿಸಿದ ಮೊದಲ ಟೆಸ್ಟ್ ಶತಕವನ್ನು ಮಗಳಿಗೆ ಅರ್ಪಿಸಿದ್ದಾರೆ. ಅದನ್ನು ಸೂಚಿಸುವ ಸಲುವಾಗಿ ಕೆಎಲ್ಆರ್ ಮಗು ಬೆರಳು ಚೀಪುತ್ತಾ ಸಂಭ್ರಮಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಕೆಎಲ್ ರಾಹುಲ್ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 162 ರನ್ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಧ್ರುವ್ ಜುರೆಲ್ (125) ಹಾಗೂ ರವೀಂದ್ರ ಜಡೇಜಾ (104) ಶತಕ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 448 ರನ್ ಕಲೆಹಾಕಿದೆ.