AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಉಫ್​... ಅತ್ಯದ್ಭುತ ಕ್ಯಾಚ್​ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ನಿತೀಶ್

VIDEO: ಉಫ್​… ಅತ್ಯದ್ಭುತ ಕ್ಯಾಚ್​ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ನಿತೀಶ್

ಝಾಹಿರ್ ಯೂಸುಫ್
|

Updated on:Oct 04, 2025 | 10:55 AM

Share

India vs West Indies, 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 162 ರನ್​ಗಳಿಗೆ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ 448 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ವಿಂಡೀಸ್​ ಪಡೆಗೆ ಆರಂಭಿಕ ಆಘಾತ ನೀಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲೂ ವೆಸ್ಟ್ ಇಂಡೀಸ್ ತಂಡ ಆರಂಭಿಕ ಆಘಾತಕ್ಕೆ ಒಳಗಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 162 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 448 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

ಅದರಂತೆ ಮೂರನೇ ದಿನದಾಟದಲ್ಲಿ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡವು ಕೇವಲ 12 ರನ್​ಗೆ ಮೊದಲ ವಿಕೆಟ್ ಕಳೆದುಕೊಂಡಿದೆ. ಹೀಗೆ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ಸಿಗಲು ಮುಖ್ಯ ಕಾರಣ ನಿತೀಶ್ ಕುಮಾರ್ ರೆಡ್ಡಿ.

ಮೊಹಮ್ಮದ್ ಸಿರಾಜ್ ಎಸೆದ 8ನೇ ಓವರ್​ನ ಎರಡನೇ ಎಸೆತದಲ್ಲಿ ತೇಜ್​ನರೈನ್ ಚಂದ್ರಪಾಲ್ ಲೆಗ್ ಸೈಡ್​ನತ್ತ ಬಾರಿಸಲು ಯತ್ನಿಸಿದ್ದರು. ಅತ್ತ ಸ್ಕ್ವೇರ್ ಲೆಗ್​ನತ್ತ ಫೀಲ್ಡಿಂಗ್​ನಲ್ಲಿದ್ದ ನಿತೀಶ್ ಕುಮಾರ್ ರೆಡ್ಡಿ ಕ್ಷಣಾರ್ಧದಲ್ಲೇ ಡೈವ್ ಹೊಡೆದು ಚೆಂಡನ್ನು ಹಿಡಿದಿದ್ದಾರೆ.

ಇದೀಗ ನಿತೀಶ್ ಕುಮಾರ್ ರೆಡ್ಡಿ ಗಾಳಿಯಲ್ಲಿ ಹಾರಿ ಹಿಡಿದ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮುಂದುವರೆಸಿರುವ ವೆಸ್ಟ್ ಇಂಡೀಸ್ 15 ಓವರ್​ಗಳ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 30 ರನ್​ ಕಲೆಹಾಕಿದೆ. ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಹಾಗೂ ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.​

Published on: Oct 04, 2025 10:54 AM