IND vs PAK: ಭಾರತ-ಪಾಕ್ ನಡುವಣ ಹೈವೋಲ್ಟೇಜ್ ಮ್ಯಾಚ್​ಗೆ ಕ್ಷಣಗಣನೆ

Updated on: Oct 05, 2025 | 8:55 AM

India Women vs Pakistan Women: ಏಕದಿನ ಕ್ರಿಕೆಟ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮಹಿಳಾ ತಂಡಗಳು ಈವರೆಗೆ 11 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 11 ಪಂದ್ಯಗಳನ್ನು ಸಹ ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.

ವುಮೆನ್ಸ್ ವರ್ಲ್ಡ್​ಕಪ್​ನ 6ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ಮಹಿಳಾ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ.

ಏಕದಿನ ಕ್ರಿಕೆಟ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮಹಿಳಾ ತಂಡಗಳು ಈವರೆಗೆ 11 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 11 ಪಂದ್ಯಗಳನ್ನು ಸಹ ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.

ಇನ್ನು ಈ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್ ಹಾಗೂ ವೆಬ್​ಸೈಟ್​ಗಳಲ್ಲೂ ಈ ಮ್ಯಾಚ್​ನ ಲೈವ್ ಸ್ಟೀಮಿಂಗ್ ಇರಲಿದೆ.

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್ ಕೀಪರ್), ಕ್ರಾಂತಿ ಗೌಡ್, ಅಮನ್ಜೋತ್ ಕೌರ್, ರಾಧಾ ಯಾದವ್, ಶ್ರೀ ಚಾರಣಿ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ್ ರಾಣಾ.

ಪಾಕಿಸ್ತಾನ್ ತಂಡ: ಫಾತಿಮಾ ಸನಾ (ನಾಯಕಿ), ಮುನೀಬಾ ಅಲಿ ಸಿದ್ದಿಕಿ (ಉಪನಾಯಕಿ), ಅಲಿಯಾ ರಿಯಾಜ್, ಡಯಾನಾ ಬೇಗ್, ಐಮನ್ ಫಾತಿಮಾ, ನಶ್ರಾ ಸುಂಧು, ನತಾಲಿಯಾ ಪರ್ವೇಝ್, ಒಮೈಮಾ ಸೊಹೈಲ್, ರಮೀನ್ ಶಮೀಮ್, ಸದಾಫ್ ಶಮಾಸ್, ಸಾದಿಯಾ ಇಕ್ಬಾಲ್, ಶಾವಾಲ್ ಝುಲ್ಫಿಕರ್, ಸಿದ್ರಾ ಅಮಿನ್, ಸಿದ್ರಾ ಅಮಿನ್, ಸಿದ್ರಾ ನವಾಝ್, ಸೈದಾ ಅರೂಬ್ ಶಾ.

 

 

Published on: Oct 05, 2025 08:54 AM