Independence Day 2023: ಹಾಸನ SP ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ವಿದ್ಯಾರ್ಥಿನಿ

Edited By:

Updated on: Aug 15, 2023 | 10:18 AM

ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಎಸ್ಪಿ ಹರಿರಾಮ್ ಶಂಕರ್ ಅವರು ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿಗೆ ಧ್ವಜಾರೋಹಣ ನೆರವೇರಿಸಲು ಅವಕಾಶ ಮಾಡಿಕೊಂಡಿದ್ದಾರೆ.

ಹಾಸನ, (ಆಗಸ್ಟ್ 15): ದೇಶಾದ್ಯಂತ ಇಂದು(ಆ.15) ಸ್ವಾಂತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶಾಲಾ-ಕಚೇರಿಗಳಲ್ಲಿ ಆಯಾ ಮುಖ್ಯಸ್ಥರು ಅಥವಾ ಅವರ ಅನುಪಸ್ಥಿತಿಯಲ್ಲಿ ಇತರೆ ಸದಸ್ಯರು ಧ್ವಜರೋಹಣ ನೆರವೇರಿಸಿದ್ದಾರೆ. ಆದರೆ, ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಎಸ್ಪಿ ಹರಿರಾಮ್ ಶಂಕರ್ ಅವರು ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿಗೆ ಧ್ವಜಾರೋಹಣ ನೆರವೇರಿಸಲು ಅವಕಾಶ ಮಾಡಿಕೊಂಡಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಅಂಗಡಿಹಳ್ಳಿಯ ಸಂಗೀತ ಎಸ್​ಎಸ್​ಎಲ್​ಸಿಯಲ್ಲಿ ಹೆಚ್ಚು ಅಂಕಗಳಿಸಿದ್ದಾರೆ. ಇದೀಗ ಸಂಗೀತ ಇಂದು ಹಾಸನ ಎಸ್ಪಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಸಂತೋಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us