ಸ್ವಾತಂತ್ರ್ಯೋತ್ಸವ: ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ನಡೆಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಗೆ ಶುಭಾಶಯ ಕೋರಿದರು. ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳು, ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ಎಲ್ಲರಿಗೂ ಧನ್ಯತಾಭಾವದಿಂದ ಸ್ಮರಿಸೋಣ ಎಂದರು. ವಿಡಿಯೋ ಇಲ್ಲಿದೆ.
ಬೆಂಗಳೂರು, ಆಗಸ್ಟ್ 15: 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ಮಾಡಿದರು. ನಂತರ ಮಾಣೆಕ್ ಷಾ ಪರೇಡ್ ಮೈದಾನಕ್ಕೆ ತೆರಳಿ ಅಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಜೀಪ್ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ಎಲ್ಲರನ್ನೂ ಧನ್ಯತಾಭಾವದಿಂದ ಸ್ಮರಿಸೋಣ ಎಂದರು. ಪಹಲ್ಗಾಮ್ ದಾಳಿಯಲ್ಲಿ ಮಡಿದವರು, ಪಾಕ್ ವಿರುದ್ಧ ಹೋರಾಡಿ ಮಡಿದವರಿಗೂ ಸಿದ್ದರಾಮಯ್ಯ ಗೌರವ ಸಲ್ಲಿಸಿದರು.
Latest Videos

