ಭಾರತ- ಪಾಕ್ ನಡುವೆ ರಾಜಿಯಾಗಬೇಕು; ಗಂಡರ್ಬಾಲ್ ದಾಳಿ ನಂತರ ಮೆಹಬೂಬಾ ಮುಫ್ತಿ ಸಲಹೆ
ಗಂಡರ್ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದಾಗ ವೈದ್ಯರು ಮತ್ತು 6 ನಿರ್ಮಾಣ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಇಂದು ಗಂಡರ್‌ಬಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದು ರಾಜಿಯಾಗಬೇಕೆಂದು ಮತ್ತೊಮ್ಮೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ರಕ್ತಪಾತವನ್ನು ತೊಡೆದುಹಾಕಲು ಭಾರತ ಮತ್ತು ಪಾಕಿಸ್ತಾನದ ನಡುವಿನ ಏಕೈಕ ಮಾರ್ಗವೆಂದರೆ ಸಾಮರಸ್ಯ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಹೇಳಿದ್ದಾರೆ. ಅಕ್ಟೋಬರ್ 20 ರಂದು ಗಂಡರ್‌ಬಾಲ್‌ನಲ್ಲಿ ಭಯೋತ್ಪಾದಕರಿಂದ ಹತ್ಯೆಗೀಡಾದ ಡಾ. ಶಹನವಾಜ್ ದಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಜಿ ಸಿಎಂ ಮುಫ್ತಿ ಈ ಹೇಳಿಕೆ ನೀಡಿದ್ದಾರೆ.
ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವವರೆಗೂ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರವು ಹೇಳಿದೆ. ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿಗ್ರಹಿಸಿದ ನಂತರ ಮಾತ್ರ ಮಾತುಕತೆ ಮುಂದುವರಿಯುತ್ತದೆ ಎಂದು ಸರ್ಕಾರ ನಿರಂತರವಾಗಿ ಒತ್ತಿಹೇಳಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ