ಸ್ಕ್ವಾಷ್ ವಿಶ್ವಕಪ್ ಗೆದ್ದ ಭಾರತ

Updated on: Dec 15, 2025 | 10:04 AM

Squash World Cup 2025: ಭಾರತ ತಂಡವು ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದಕ್ಕೂ ಮುನ್ನ 2023 ರಲ್ಲಿ ಕಂಚಿನ ಪದಕ ಗೆದ್ದಿದ್ದು ಭಾರತ ತಂಡದ ಶ್ರೇಷ್ಠ ಸಾಧನೆಯಾಗಿತ್ತು. ಈ ಬಾರಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜೋಶ್ನಾ ಚಿನ್ನಪ್ಪ, ಅಭಯ್ ಸಿಂಗ್ ಹಾಗೂ ಅನಾಹತ್ ಸಿಂಗ್ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಕ್ವಾಷ್ ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಚೆನ್ನೈನ ಎಕ್ಸ್‌ಪ್ರೆಸ್ ಅವೆನ್ಯೂ ಮಾಲ್​ನ ಕೋರ್ಟ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತ ಹಾಂಗ್ ಕಾಂಗ್ ತಂಡವನ್ನು 3-0 ಅಂತರದಿಂದ ಸೋಲಿಸಿ ಭಾರತ ತಂಡವು ವಿಶ್ವಕಪ್​ ಅನ್ನು ಮುಡಿಗೇರಿಸಿಕೊಂಡಿದೆ.

ಸ್ಕ್ವಾಷ್ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಏಷ್ಯಾದ ಎರಡು ದೇಶಗಳು ಫೈನಲ್‌ನಲ್ಲಿ ಸ್ಪರ್ಧಿಸಿದ್ದು ಇದೇ ಮೊದಲು. ಹೀಗಾಗಿಯೇ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಲಾಗಿತ್ತು. ಈ ನಿರೀಕ್ಷೆಯನ್ನು ಭಾರತೀಯ ತಾರೆಗಳು ಹುಸಿಗೊಳಿಸಿರಲಿಲ್ಲ.

ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಜೋಶ್ನಾ ಚಿನಪ್ಪ  7-3, 2-7, 7-5, 7-1 ಅಂತರದಿಂದ ಹಾಂಗ್ ​ಕಾಂಗ್​ನ ಕಾ ಯಿ ಲೀಗೆ ಸೋಲುಣಿಸಿದರು. ಇನ್ನು ದ್ವಿತೀಯ ಸುತ್ತಿನಲ್ಲಿ ಅಭಯ್ ಸಿಂಗ್ ಹಾಂಗ್​ ಕಾಂಗ್​ನ ಅಲೆಕ್ಸ್ ಲಾವ್ 7-1, 7-4, 7-4 ಅವರನ್ನು ನೇರ ಸೆಟ್​ಗಳಿಂದ ಮಣಿಸಿದರು. ಹಾಗೆಯೇ ಅಂತಿಮ ಸುತ್ತಿನಲ್ಲಿ ಟೊಮ್ಯಾಟೊ ಹೊ ವಿರುದ್ಧ 7-2, 7-2, 7-5 ಸೆಟ್​ಗಳಿಂದ ಗೆಲ್ಲುವಲ್ಲಿ ಅನಾಹತ್ ಸಿಂಗ್ ಯಶಸ್ವಿಯಾದರು.

ಈ ಮೂಲಕ ಭಾರತ ತಂಡವು ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದಕ್ಕೂ ಮುನ್ನ 2023 ರಲ್ಲಿ ಕಂಚಿನ ಪದಕ ಗೆದ್ದಿದ್ದು ಭಾರತ ತಂಡದ ಶ್ರೇಷ್ಠ ಸಾಧನೆಯಾಗಿತ್ತು. ಈ ಬಾರಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜೋಶ್ನಾ ಚಿನ್ನಪ್ಪ, ಅಭಯ್ ಸಿಂಗ್ ಹಾಗೂ ಅನಾಹತ್ ಸಿಂಗ್ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

 

 

Loading...
Unable to load recommendations.
Follow Us
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More