AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿ ಒಕ್ಕೂಟದಿಂದ ದೆಹಲಿ ಚಲೋ: ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ

ಇಂಡಿ ಒಕ್ಕೂಟದಿಂದ ದೆಹಲಿ ಚಲೋ: ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ

ನಯನಾ ರಾಜೀವ್
|

Updated on: Oct 11, 2026 | 8:18 AM

Share

ದೆಹಲಿಯಲ್ಲಿ ಇಂಡಿ ಒಕ್ಕೂಟ ಮತ್ತೆ ಬೃಹತ್ ಪ್ರತಿಭಟನೆಗೆ ಸಜ್ಜಾಗಿದೆ. ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ. ಮಮತಾ ಬ್ಯಾನರ್ಜಿ, ಕೆ.ಸಿ. ವೇಣುಗೋಪಾಲ್ ಸೇರಿ 10ಕ್ಕೂ ಹೆಚ್ಚು ನಾಯಕರು ಭಾಗವಹಿಸಲಿದ್ದಾರೆ. ದೆಹಲಿ ಪ್ರತಿಭಟನೆಗೆ ಸಂಬಂಧಿಸಿದ ಸುಪ್ರೀಂಕೋರ್ಟ್ ಆದೇಶ ಪಾಲಿಸದ ಆರೋಪದ ಮೇಲೆ ಕೇಂದ್ರ ಗೃಹ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಯಲಿದೆ.

ನವದೆಹಲಿ, ಅಕ್ಟೋಬರ್ 11:ದೆಹಲಿಯಲ್ಲಿ ಮತ್ತೆ ಬೃಹತ್ ಪ್ರತಿಭಟನೆಗೆ ಇಂಡಿ ಒಕ್ಕೂಟ ಸಜ್ಜಾಗಿದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪಟ್ಟು ಹಿಡಿದಿದ್ದು, ಈ ಸಂಬಂಧ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆಸಿದೆ. ಈ ಪ್ರತಿಭಟನೆಯಲ್ಲಿ ಹತ್ತಕ್ಕೂ ಹೆಚ್ಚು ವಿಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಪ್ರತಿಭಟನೆಯಲ್ಲಿ ಕೈಜೋಡಿಸಲಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಭಾರತದ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಳಜಿ ವಹಿಸುವ ಪ್ರತಿಯೊಬ್ಬರೂ ಸೋಮವಾರ ದೆಹಲಿಯಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ತಮ್ಮೊಂದಿಗೆ ಕೈಜೋಡಿಸುವಂತೆ ಕರೆ ನೀಡಿದ್ದಾರೆ.

ಮತ್ತೊಂದೆಡೆ, ದೆಹಲಿ ಪ್ರತಿಭಟನೆಗೆ ಸಂಬಂಧಿಸಿದ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಿಲ್ಲ ಎಂಬ ಆರೋಪದ ಮೇಲೆ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ. ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ಸಲ್ಲಿಸಿರುವ ಈ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ವಿಶೇಷ ವಿಚಾರಣೆ ನಡೆಸಲಿದೆ. ದೆಹಲಿಯಲ್ಲಿ ನಡೆಯಲಿರುವ ಈ ಪ್ರತಿಭಟನೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More