ದೆಹಲಿಯಲ್ಲಿ ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿ ಒಕ್ಕೂಟವು ವೋಟ್ ಬಚಾವೋ, ದೇಶ್ ಬಚಾವೋ ಘೋಷಣೆಯೊಂದಿಗೆ ಬೃಹತ್ ರ‍್ಯಾಲಿ ನಡೆಸುತ್ತಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಅನೇಕ ಹಿರಿಯ ನಾಯಕರು ಭಾಗವಹಿಸಿದ್ದಾರೆ. ದೇಶದ ವಿವಿಧೆಡೆಯಿಂದ ಕಾರ್ಯಕರ್ತರು ಆಗಮಿಸಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ನವದೆಹಲಿ, ನವೆಂಬರ್ 1: ಮತದಾರರ ಹಕ್ಕುಗಳ ರಕ್ಷಣೆ ಮತ್ತು ಚುನಾವಣಾ ಆಯೋಗದ ವಿರುದ್ಧದ ಆರೋಪಗಳನ್ನು ಮುಂದಿಟ್ಟುಕೊಂಡು ಇಂಡಿ ಒಕ್ಕೂಟ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರ‍್ಯಾಲಿ ಆಯೋಜಿಸಿದೆ. ‘ವೋಟ್ ಬಚಾವೋ, ದೇಶ್ ಬಚಾವೋ’ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಮೆರವಣಿಗೆಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಚಾಲನೆ ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಮಮತಾ ಬ್ಯಾನರ್ಜಿ, ಸಿದ್ದರಾಮಯ್ಯ, ಹೇಮಂತ್ ಸೊರೇನ್, ತೇಜಸ್ವಿ ಯಾದವ್ ಸೇರಿದಂತೆ ಹಲವು ಪ್ರಮುಖ ನಾಯಕರು ರ‍್ಯಾಲಿಯಲ್ಲಿ ಭಾಗವಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.
ದೇಶದ ವಿವಿಧ ಭಾಗಗಳಿಂದ ಸಾವಿರಾರು ಕಾರ್ಯಕರ್ತರು ದೆಹಲಿಗೆ ಆಗಮಿಸಿದ್ದಾರೆ. ಜನಸಂದಣಿ ನಿರ್ವಹಣೆಗಾಗಿ 10 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, 200 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಇಂಡಿಯಾ ಒಕ್ಕೂಟದ ನಾಯಕರು ತಿಳಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

