AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ: ಪೊಲೀಸ್ ದೌರ್ಜನ್ಯದ ಆರೋಪ, ದೇಶಾದ್ಯಂತ ಕರಾಳ ದಿನಾಚರಣೆಗೆ ಕರೆ

ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ: ಪೊಲೀಸ್ ದೌರ್ಜನ್ಯದ ಆರೋಪ, ದೇಶಾದ್ಯಂತ ಕರಾಳ ದಿನಾಚರಣೆಗೆ ಕರೆ

ನಯನಾ ರಾಜೀವ್
|

Updated on:Oct 08, 2026 | 8:59 AM

Share

ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ನಾಯಕರು ನಡೆಸಿದ ಪ್ರತಿಭಟನೆಯ ವೇಳೆ ದೆಹಲಿ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಚುನಾವಣಾ ಆಯೋಗದ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಧರಣಿ ನಡೆಸಿದ್ದರು. ಈ ಸಂದರ್ಭದಲ್ಲಿ ದೌರ್ಜನ್ಯ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ) ಇಂದು ಕರಾಳ ದಿನ ಆಚರಣೆಗೆ ಕರೆ ನೀಡಿದ್ದು, ದೇಶದಾದ್ಯಂತ ಬೃಹತ್ ಪ್ರತಿಭಟನೆಗೆ ಸೂಚನೆ ನೀಡಿದೆ.

ನವದೆಹಲಿ, ಅಕ್ಟೋಬರ್ 08: ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ನಾಯಕರು ನಡೆಸಿದ ಪ್ರತಿಭಟನೆಯ ವೇಳೆ ದೆಹಲಿ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಚುನಾವಣಾ ಆಯೋಗದ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಧರಣಿ ನಡೆಸಿದ್ದರು. ಈ ಸಂದರ್ಭದಲ್ಲಿ ದೌರ್ಜನ್ಯ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ) ಇಂದು ಕರಾಳ ದಿನ ಆಚರಣೆಗೆ ಕರೆ ನೀಡಿದ್ದು, ದೇಶದಾದ್ಯಂತ ಬೃಹತ್ ಪ್ರತಿಭಟನೆಗೆ ಸೂಚನೆ ನೀಡಿದೆ.

ಕಾಂಗ್ರೆಸ್ ಪಕ್ಷವು ರಾಜ್ಯ, ಜಿಲ್ಲಾ ಮಟ್ಟದಲ್ಲಿ ಧರಣಿ ನಡೆಸುವಂತೆ ವೇಣುಗೋಪಾಲ್ ಮೂಲಕ ಸೂಚನೆ ನೀಡಿದೆ. ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಅವರ ರಾಜೀನಾಮೆ ಪಡೆಯುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಕಾಂಗ್ರೆಸ್ ಹೇಳಿದೆ. ಇದರ ಭಾಗವಾಗಿ ಇಂದು ಎಲ್ಲೆಡೆ ಕರಾಳ ದಿನ ಆಚರಣೆಗೆ ಕರೆ ನೀಡಲಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸಂವಿಧಾನದ ಪ್ರತಿಯನ್ನು ಹಿಡಿದು ರಸ್ತೆಯಲ್ಲೇ ಮಲಗಿದ್ದರು. ರಾಹುಲ್ ಗಾಂಧಿ ಅವರನ್ನು ಸಹ ಪೊಲೀಸರು ಬಲಪ್ರಯೋಗಿಸಿ ವಶಕ್ಕೆ ಪಡೆದಿದ್ದರು.

ಚುನಾವಣಾ ಆಯೋಗದ ವಿರುದ್ಧ ದೆಹಲಿ ಈಗಾಗಲೇ ರಣರಂಗವಾಗಿ ಮಾರ್ಪಟ್ಟಿದೆ. ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿ, ಮೋದಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ ತಮ್ಮ ಗುರಿ ಎಂದು ಘೋಷಿಸಿದ್ದಾರೆ. ಪೊಲೀಸ್ ಕ್ರಮವನ್ನು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಖಂಡಿಸಿದ್ದಾರೆ. ಪ್ರಜಾಪ್ರಭುತ್ವದ ಕರಾಳ ದಿನ ಎಂದು ಕಾಂಗ್ರೆಸ್ ಇಂದಿನ ಕರಾಳ ದಿನವನ್ನು ಆಚರಿಸಲು ಮುಂದಾಗಿದ್ದು, ರಾಜ್ಯ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಪ್ರತಿಭಟನೆಗೆ ಕರೆ ನೀಡಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 08, 2026 08:56 AM

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More