Video: ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ನೇತೃತ್ವದಲ್ಲಿ ಸಂಸದರ ಮೆರವಣಿಗೆ
ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರ ಮೆರವಣಿಗೆ ನಡೆಯುತ್ತಿದೆ. ಸಂಸತ್ ಭವನದಿಂದ ಕೇಂದ್ರ ಚುನಾವಣಾ ಆಯೋಗದವರೆಗೆ ಮೆರವಣಿಗೆ ನಡೆಯಲಿದೆ. ಆದರೆ ಈ ಮೆರವಣಿಗೆಗೆ ಅನುಮತಿ ಸಿಗದ ಕಾರಣ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆಯುವ ಸಾಧ್ಯತೆಗಳು ಬಲವಾಗಿವೆ.
ನವದೆಹಲಿ, ಆಗಸ್ಟ್ 11: ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರ ಮೆರವಣಿಗೆ ನಡೆಯುತ್ತಿದೆ. ಸಂಸತ್ ಭವನದಿಂದ ಕೇಂದ್ರ ಚುನಾವಣಾ ಆಯೋಗದವರೆಗೆ ಮೆರವಣಿಗೆ ನಡೆಯಲಿದೆ. ಆದರೆ ಈ ಮೆರವಣಿಗೆಗೆ ಅನುಮತಿ ಸಿಗದ ಕಾರಣ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆಯುವ ಸಾಧ್ಯತೆಗಳು ಬಲವಾಗಿವೆ.
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಹಾಗೂ ಮತ ಕಳ್ಳತನದ ವಿರುದ್ಧ ಧ್ವನಿ ಎತ್ತುವುದು ಈ ಜಾಥಾದ ಉದ್ದೇಶವಾಗಿದೆ. ಎಸ್ಐಆರ್ ಸೋಗಿನಲ್ಲಿ ಬಿಹಾರದಲ್ಲಿ ಲಕ್ಷಾಂತರ ಮತದಾರರ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ, ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಾಯವಾಗಿದೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಕಾಂಗ್ರೆಸ್ ನೇತೃತ್ವದಲ್ಲಿ 25 ವಿರೋಧ ಪಕ್ಷಗಳ 300ಕ್ಕೂ ಅಧಿಕ ಸಂಸದರು ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ.
ಕಾಂಗ್ರೆಸ್ , ಸಮಾಜವಾದಿ ಪಕ್ಷ, ಟಿಎಂಸಿ, ಡಿಎಂಕೆ, ಎಎಪಿ , ಎಡ ಪಕ್ಷಗಳು, ಆರ್‌ಜೆಡಿ, ಎನ್‌ಸಿಪಿ (ಎಸ್‌ಪಿ), ಶಿವಸೇನೆ (ಯುಬಿಟಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ಹಲವಾರು ಪಕ್ಷಗಳು ಬೆಳಗ್ಗೆ 11.30 ಕ್ಕೆ ಸಂಸತ್ತಿನ ಮಕರ ದ್ವಾರದಿಂದ ಮೆರವಣಿಗೆ ಆರಂಭಿಸಿವೆ.ಇಂಡಿಯಾ ಬ್ಲಾಕ್ ಬ್ಯಾನರ್ನಡಿ ಪ್ರತಿಭಟನೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

