Diwali 2023: ಟೀಮ್ ಇಂಡಿಯಾ ಪಾಳಯದಲ್ಲಿ ದೀಪಾವಳಿ ಸಂಭ್ರಮ: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಆಟಗಾರರು
Team India celebrate Diwali: ಟೀಮ್ ಇಂಡಿಯಾದ ಎಲ್ಲ ಆಟಗಾರರು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿ, ದೀಪಾವಳಿಯನ್ನು ಆಚರಿಸಿದ್ದಾರೆ. ರೋಹಿತ್ ಪತ್ನಿ ರಿತಿಕಾ ಜೊತೆಗೆ ಕ್ಲಾಸಿ ಕುರ್ತಾದಲ್ಲಿ ಕಾಣಿಸಿಕೊಂಡಿದ್ದಾರೆ. ಕೊಹ್ಲಿ-ಅನುಷ್ಕಾ ಕೂಡ ಸಾಂಪ್ರದಾಯಿಕ ಉಡುಗೆಯಲ್ಲಿರುವ ವಿಡಿಯೋ ವೈರಲ್ ಆಗುತ್ತಿದೆ.
ಭಾನುವಾರ ನೆದರ್ಲೆಂಡ್ಸ್ (IND vs NED) ವಿರುದ್ಧದ ಅಂತಿಮ ಕ್ರಿಕೆಟ್ ವಿಶ್ವಕಪ್ ಲೀಗ್ ಪಂದ್ಯಕ್ಕೆ ಮುಂಚಿತವಾಗಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಗಿಲ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್ ಸೇರಿದಂತೆ ಭಾರತ ಕ್ರಿಕೆಟ್ ತಂಡವು ನವೆಂಬರ್ 11 ರಂದು ದೀಪಾವಳಿಯನ್ನು ಆಚರಿಸಿದೆ. ಟೀಮ್ ಇಂಡಿಯಾದ ಎಲ್ಲ ಆಟಗಾರರು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು. ರೋಹಿತ್ ಅವರು ಪತ್ನಿ ರಿತಿಕಾ ಜೊತೆಗೆ ಕ್ಲಾಸಿ ಕುರ್ತಾದಲ್ಲಿ ಕಾಣಿಸಿಕೊಂಡಿದ್ದಾರೆ. ಕೊಹ್ಲಿ-ಅನುಷ್ಕಾ ಕೂಡ ಸಾಂಪ್ರದಾಯಿಕ ಉಡುಗೆಯಲ್ಲಿರುವ ವಿಡಿಯೋ ವೈರಲ್ ಆಗುತ್ತಿದೆ. ಇದಕ್ಕೂ ಮುನ್ನ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೀಪಾವಳಿಯ ಆರಂಭವನ್ನು ಮತ್ತು ಕ್ರಿಕೆಟ್ ವಿಶ್ವಕಪ್ ಅನ್ನು ಆಚರಿಸಲು ಮುಂಬೈನ ಐತಿಹಾಸಿಕ ಗೇಟ್‌ವೇ ಆಫ್ ಇಂಡಿಯಾದಲ್ಲಿ ವಿಶೇಷ 3D ಪ್ರೊಜೆಕ್ಷನ್ ಅನ್ನು ಹಮ್ಮಿಕೊಂಡಿತ್ತು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ