ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ

Updated on: May 05, 2025 | 3:15 PM

ಜಮ್ಮು ಮತ್ತು ಕಾಶ್ಮೀರದಲ್ಲಿ 26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ತನ್ನ ಪ್ರತಿ-ಕ್ರಮಗಳನ್ನು ತೀವ್ರಗೊಳಿಸಿದೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದ ನಂತರ, ಭಾರತವು ಈಗ ಚೆನಾಬ್ ನದಿಯಿಂದ ನೀರಿನ ಹರಿವನ್ನು ನಿಲ್ಲಿಸಿದೆ. ಪಾಕಿಸ್ತಾನಕ್ಕೆ ಚೆನಾಬ್ ನದಿಯ ಹರಿವನ್ನು ನಿಯಂತ್ರಿಸುವ ಬಾಗ್ಲಿಹಾರ್ ಮತ್ತು ಸಲಾಲ್ ಅಣೆಕಟ್ಟುಗಳ ಗೇಟ್‌ಗಳನ್ನು ಭಾರತ ಸರ್ಕಾರ ಮುಚ್ಚಿದೆ.

ಶ್ರೀನಗರ, ಮೇ 5: ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terror Attack) ನಂತರ ಭಾರತವು ಸಲಾಲ್ ಮತ್ತು ಬಾಗ್ಲಿಹಾರ್ ಅಣೆಕಟ್ಟುಗಳ ಮೂಲಕ ಪಾಕಿಸ್ತಾನಕ್ಕೆ ಚೆನಾಬ್ ನದಿಯ ಹರಿವನ್ನು ಕಡಿತಗೊಳಿಸಿದೆ. ಇದರಿಂದ ಪಾಕಿಸ್ತಾನಕ್ಕೆ ಬಹಳ ನೀರಿನ ತೊಂದರೆ ಎದುರಾಗಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸಿಂಧೂ ನದಿ ಒಪ್ಪಂದ ರದ್ದುಗೊಳಿಸಿದ್ದ ಭಾರತ ಇದೀಗ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಸಲಾಲ್ ಅಣೆಕಟ್ಟಿನ ಎಲ್ಲಾ ಗೇಟ್‌ಗಳನ್ನು ಮುಚ್ಚಿದೆ. ಇದರ ಪರಿಣಾಮವಾಗಿ ಈ ನದಿಯ ಕೆಳಭಾಗದ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಇದು ಚೆನಾಬ್ ನದಿಯ ಬಹುತೇಕ ಭಾಗಗಳನ್ನು ಒಣಗಿಸಿದೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದ ನಂತರ, ಭಾರತವು ಈಗ ಚೆನಾಬ್ ನದಿಯಿಂದ ನೀರಿನ ಹರಿವನ್ನು ನಿಲ್ಲಿಸಿದೆ. ಪಾಕಿಸ್ತಾನಕ್ಕೆ ಚೆನಾಬ್ ನದಿಯ ಹರಿವನ್ನು ನಿಯಂತ್ರಿಸುವ ಬಾಗ್ಲಿಹಾರ್ ಮತ್ತು ಸಲಾಲ್ ಅಣೆಕಟ್ಟುಗಳ ಗೇಟ್‌ಗಳನ್ನು ಭಾರತ ಸರ್ಕಾರ ಮುಚ್ಚಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More