India-Pakistan War Updates; ಪಾಕಿಸ್ತಾನ ನಗರ ಪ್ರದೇಶ ಸೇನಾನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ
ವಿವೇಚನೆಹೀನ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಗಡಿಭಾಗಗಳಾಗಿರುವ ಉರಿ ಸೆಕ್ಟರ್, ಬಾರಾಮುಲ್ಲಾ ಮತ್ತು ಇತರ ನಾಗರಿಕ ನೆಲೆಗಳ ಮೇಲೆ ದಾಳಿ ನಡೆಸಿ ತನ್ನ ನೀಚಬುದ್ಧಿ ಪ್ರದರ್ಶಿಸುವುದನ್ನು ಮುಂದುವರಿಸಿದೆ. ಭಾರತ ಕಂಟ್ರೋಲ್ಡ್ ಅಗ್ರೆಶನ್ ಪ್ರದರ್ಶಿಸುತ್ತಿದ್ದರೆ ಪಾಕಿಸ್ತಾನ ಅಮಾಯಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸುತ್ತಿದೆ. ಗಡಿಭಾಗದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಬೆಂಗಳೂರು, ಮೇ 9: ಭಾರತದೊಂದಿಗೆ ಕಾಲು ಕೆದರಿಕೊಂಡು ಜಗಳಕ್ಕೆ ಬಂದ ಪಾಕಿಸ್ತಾನ ತನ್ನ ತಪ್ಪಿಗೆ ತಕ್ಕ ಪ್ರಾಯಶ್ಚಿತ ಅನುಭವಿಸುತ್ತಿದೆ. ಪಾಕಿಸ್ತಾನದ ರಾವಲ್ಪಿಂಡಿ, ಲಾಹೋರ್, ಕರಾಚಿ ಮತ್ತು ಇಸ್ಲಾಮಾಬಾದ್ ನಗರಗಳ ಮೇಲೆ ಭಾರತೀಯ ಸೇನೆ ಡ್ರೋನ್ ಗಳ ಮೂಲಕ ದಾಳಿ ನಡೆಸಿದೆ. ಪಾಕಿಸ್ತಾನದ ನಗರಗಳ ಮೇಲೆ ಭಾರತ 75 ವರ್ಷಗಳಲ್ಲಿ ಮೊದಲಬಾರಿಗೆ ಆಕ್ರಮಣ ನಡೆಸಿದೆ. ಅದರೆ, ನಗರಪ್ರದೇಶಗಳ ಯಾವುದೇ ನಾಗರಿಕ ನೆಲೆಗಳ ಮೇಲೆ ಭಾರತ ದಾಳಿ ನಡೆಸಿಲ್ಲವೆಂದು ಸೇನಾಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. ಭಾರತ ನಡೆಸಿರುವ ಆಕ್ರಮಣದ ಬಗ್ಗೆ ಮೇಲಿಂದ ಮೇಲೆ ಅಪ್ಡೇಟ್ ಗಳು ಬರುತ್ತಲೇ ಇವೆ. ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಬಂಕರ್ ಗಳಲ್ಲಿ ಆಶ್ರಯ ಪಡೆದಿರುವ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಪಾಕ್ ದಾಳಿಯನ್ನು ವಿಫಲಗೊಳಿಸಿದ ಭಾರತದ ಸುದರ್ಶನ ಚಕ್ರ S-400: ಇದರ ತಾಕತ್ತಿನ ಬಗ್ಗೆ ತಿಳಿದುಕೊಳ್ಳಲೇಬೇಕು
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್

