ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಕಾಂಗ್ರೆಸ್​ನಿಂದ, ಬಿಜೆಪಿಯಿಂದಲ್ಲ: ಸಿದ್ದರಾಮಯ್ಯ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Sep 29, 2022 | 2:52 PM

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ, ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಜನರನ್ನು ಬ್ಯಾನ್ ಮಾಡಲಾಗುತ್ತದೆ. ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷವನ್ನಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು:  ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿರುವರೆಂದು ಮಾಧ್ಯಮದವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಇಂದು ಮೈಸೂರಲ್ಲಿ (Mysuru) ಹೇಳಿದಾಗ ಅವರು ವ್ಯಗ್ರರಾದರು. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸನ್ನು ಬ್ಯಾನ್ ಮಾಡಬೇಕಾ ಅಂತ ಮರುಪ್ರಶ್ನಿಸಿದರು. ಮುಂದುವರಿದು ಮಾತಾಡಿದ ಅವರು ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ, ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಜನರನ್ನು ಬ್ಯಾನ್ ಮಾಡಲಾಗುತ್ತದೆ. ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷವನ್ನಲ್ಲ, ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು ಬಿಜೆಪಿಯಿಂದಲ್ಲ ಎಂದು ಹೇಳಿದರು.