AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India-Pakistan Tension: ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ವಿವರಿಸಿದ ಧಾರವಾಡದ ಯೋಧನ ಪತ್ನಿ

India-Pakistan Tension: ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ವಿವರಿಸಿದ ಧಾರವಾಡದ ಯೋಧನ ಪತ್ನಿ

ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on:May 11, 2025 | 9:06 PM

Share

ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಭಾರತ ಪಾಕಿಸ್ತಾನದ ದಾಳಿಯನ್ನು ಹತ್ತಿಕ್ಕಿದೆ. ಈ ದಾಳಿಯಿಂದ ಜಮ್ಮು ಮತ್ತು ಕಾಶ್ಮೀರದ ಜನರು ಆತಂಕದಲ್ಲಿದ್ದಾರೆ. ಬೆಳಗಾವಿಯ ಯೋಧನ ಪತ್ನಿ ತಮ್ಮ ಅನುಭವವನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಕೆಲ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಡ್ರೋನ್​ ಮತ್ತು ಕ್ಷಿಪಣಿ ಮೂಲಕ ದಾಳಿ ಮಾಡುತ್ತಿದೆ. ಪಾಕಿಸ್ತಾನದ ಕ್ಷಿಪಣಿ ಮತ್ತು ಡ್ರೋನ್​ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ನಿರಂತರ ದಾಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿನ ಜನರು ಆತಂಕಗೊಂಡಿದ್ದಾರೆ. ಪತಿಯೊಂದಿಗೆ ಜಮ್ಮುವಿನಲ್ಲಿ ವಾಸವಿದ್ದ ಧಾರವಾಡದ ಯೋಧನ ಪತ್ನಿ ರಾಜ್ಯಕ್ಕೆ ಮರಳಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆ ಟಿವಿ9 ತಿಳಿಸಿದ್ದಾರೆ.

Published on: May 11, 2025 06:48 PM

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More