India-Pakistan Tension: ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ

Updated on: May 11, 2025 | 10:49 PM

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ತುಮಕೂರಿನ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಿದ್ದಾರೆ. ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳಗಳು ತಪಾಸಣೆ ನಡೆಸಿದವು. ಪ್ರಯಾಣಿಕರ ಸಾಮಾನುಗಳನ್ನು ಮತ್ತು ನಿಲುಗಡೆ ಮಾಡಿದ ವಾಹನಗಳನ್ನು ಪರಿಶೀಲಿಸಲಾಯಿತು. ಇದು ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಂಡ ಮುನ್ನೆಚ್ಚರಿಕಾ ಕ್ರಮ.

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ (India-Pakistan Tension) ಉಂಟಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿನ ಜನಸಂದಣಿ ಪ್ರದೇಶಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ತುಮಕೂರಿನ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯದಳ, ಶ್ವಾನದಳಗಳು ಪರಿಶೀಲನೆ ನಡೆಸಿದವು. ಹಾಗೆ, ಪ್ರಯಾಣಿಕರ ಬ್ಯಾಗ್​ಗಳನ್ನು ಕೂಡ ತಪಾಸಣೆ ನಡೆಸಿದವು. ಅಲ್ಲದೇ ರೈಲು ನಿಲ್ದಾಣದಲ್ಲಿ ಪಾರ್ಕ್​ ಮಾಡಿದ್ದ ವಾಹನಗಳನ್ನು ಸಹಿತ ಮುನ್ನೆಚ್ಚರಿಕಾ ಕ್ರಮವಾಗಿ ತಪಾಸಣೆ ನಡೆಸಲಾಯಿತು.

Published on: May 11, 2025 10:48 PM