ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು: ಪಾಕಿಸ್ತಾನಕ್ಕೆ ಭಾರತದ ತಿರುಗೇಟು

Updated on: Aug 20, 2026 | 10:34 AM

ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಹೊರಗಿನ ಭದ್ರತಾ ಬ್ಯಾರಿಕೇಡ್‌ಗಳು ಮತ್ತು ಸಂಚಾರ ಬೋಲಾರ್ಡ್‌ಗಳನ್ನು ಭಾರತೀಯ ಅಧಿಕಾರಿಗಳು ಬುಲ್ಡೋಜರ್ ಮೂಲಕ ತೆರವುಗೊಳಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಮುಂಭಾಗದಲ್ಲಿದ್ದ ಭದ್ರತಾ ಬೇಲಿಗಳನ್ನು ಪಾಕಿಸ್ತಾನ ತೆಗೆದುಹಾಕಿದ ಮೂರೇ ದಿನಗಳಲ್ಲಿ ಭಾರತ ಈ ಪ್ರತೀಕಾರದ ಕ್ರಮ ಕೈಗೊಂಡಿದೆ.

ನವದೆಹಲಿ,ಆಗಸ್ಟ್ 20: ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಹೊರಗಿನ ಭದ್ರತಾ ಬ್ಯಾರಿಕೇಡ್‌ಗಳು ಮತ್ತು ಸಂಚಾರ ಬೋಲಾರ್ಡ್‌ಗಳನ್ನು ಭಾರತೀಯ ಅಧಿಕಾರಿಗಳು ಬುಲ್ಡೋಜರ್ ಮೂಲಕ ತೆರವುಗೊಳಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಮುಂಭಾಗದಲ್ಲಿದ್ದ ಭದ್ರತಾ ಬೇಲಿಗಳನ್ನು ಪಾಕಿಸ್ತಾನ ತೆಗೆದುಹಾಕಿದ ಮೂರೇ ದಿನಗಳಲ್ಲಿ ಭಾರತ ಈ ಪ್ರತೀಕಾರದ ಕ್ರಮ ಕೈಗೊಂಡಿದೆ.
ಇತ್ತೀಚೆಗೆ ಭಾರತಕ್ಕೆ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಅವರು ಶ್ರೀನಗರಕ್ಕೆ ಭೇಟಿ ನೀಡಿ “ಕಾಶ್ಮೀರ ಭಾರತದ ಪ್ರಮುಖ ಭಾಗ” ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪಾಕಿಸ್ತಾನ ತೀವ್ರ ವಿರೋಧ ವ್ಯಕ್ತಪಡಿಸಿ ಅಮೆರಿಕ ರಾಯಭಾರಿಗೆ ಸಮನ್ಸ್ ನೀಡಿತ್ತು. ಇದರ ಬೆನ್ನಲ್ಲೇ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More