AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ದೇವಾಲಯದ ಮೇಲೆ ದಾಳಿಗೆ ಸಂಚು; ಅಮೆರಿಕದಲ್ಲಿರುವ ಭಾರತೀಯರ ಸುರಕ್ಷತೆಗೆ ಭಾರತ ಆಗ್ರಹ

ಹಿಂದೂ ದೇವಾಲಯದ ಮೇಲೆ ದಾಳಿಗೆ ಸಂಚು; ಅಮೆರಿಕದಲ್ಲಿರುವ ಭಾರತೀಯರ ಸುರಕ್ಷತೆಗೆ ಭಾರತ ಆಗ್ರಹ

ಸುಷ್ಮಾ ಚಕ್ರೆ
|

Updated on: Oct 16, 2026 | 9:22 PM

Share

ಅಮೆರಿಕದ ಇಲಿನಾಯ್ಸ್‌ನಲ್ಲಿರುವ ಹಿಂದೂ ದೇವಾಲಯವೊಂದರ ಮೇಲೆ ಭಾರಿ ಪ್ರಮಾಣದ ಗುಂಡಿನ ದಾಳಿ ನಡೆಸಲು ರೂಪಿಸಲಾಗಿದ್ದ ಸಂಚನ್ನು ಅಲ್ಲಿನ ಪೊಲೀಸರು ಭಗ್ನಗೊಳಿಸಿದ ಬೆನ್ನಲ್ಲೇ, ಅಮೆರಿಕದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವಂತೆ ಭಾರತ ಇಂದು ಅಮೆರಿಕ ಸರ್ಕಾರವನ್ನು ಆಗ್ರಹಿಸಿದೆ. ಈ ಘಟನೆಯು ನಮಗೆ "ತೀವ್ರ ಕಳವಳಕಾರಿ ವಿಷಯವಾಗಿದೆ" ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಇಂದು ತಿಳಿಸಿದ್ದು, ಅಮೆರಿಕದಲ್ಲಿರುವ ಭಾರತೀಯ ಸಮುದಾಯವನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಮೆರಿಕದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ನವದೆಹಲಿ, ಅಕ್ಟೋಬರ್ 16: ಅಮೆರಿಕದ ಇಲಿನಾಯ್ಸ್‌ನಲ್ಲಿರುವ ಹಿಂದೂ ದೇವಾಲಯವೊಂದರ ಮೇಲೆ ಭಾರಿ ಪ್ರಮಾಣದ ಗುಂಡಿನ ದಾಳಿ ನಡೆಸಲು ರೂಪಿಸಲಾಗಿದ್ದ ಸಂಚನ್ನು ಅಲ್ಲಿನ ಪೊಲೀಸರು ಭಗ್ನಗೊಳಿಸಿದ ಬೆನ್ನಲ್ಲೇ, ಅಮೆರಿಕದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವಂತೆ ಭಾರತ ಇಂದು ಅಮೆರಿಕ ಸರ್ಕಾರವನ್ನು ಆಗ್ರಹಿಸಿದೆ. ಈ ಘಟನೆಯು ನಮಗೆ “ತೀವ್ರ ಕಳವಳಕಾರಿ ವಿಷಯವಾಗಿದೆ” ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಇಂದು ತಿಳಿಸಿದ್ದು, ಅಮೆರಿಕದಲ್ಲಿರುವ ಭಾರತೀಯ ಸಮುದಾಯವನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಮೆರಿಕದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

“ಇಲಿನಾಯ್ಸ್‌ನ ಹಿಂದೂ ದೇವಾಲಯವೊಂದನ್ನು ಗುರಿಯಾಗಿಸಿಕೊಂಡು ಭಾರಿ ಪ್ರಮಾಣದ ಗುಂಡಿನ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು ಎಂಬ ವರದಿಗಳನ್ನು ನಾವು ಗಮನಿಸಿದ್ದೇವೆ. ಇದು ನಮಗೆ ಅತ್ಯಂತ ಕಳವಳಕಾರಿ ವಿಷಯವಾಗಿದೆ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳ ಭದ್ರತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ರಣಧೀರ್ ಜೈಸ್ವಾಲ್ ಅಮೆರಿಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More