Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS World Cup Final: ವಿಶ್ವಕಪ್ ಫೈನಲ್ ಸಮಾರೋಪ ಸಮಾರಂಭಕ್ಕೆ ಭರ್ಜರಿ ತಯಾರಿ: ಮೋದಿ ಸ್ಟೇಡಿಯಂನಲ್ಲಿ ಪ್ರ್ಯಾಕ್ಟೀಸ್ ಹೇಗಿದೆ ನೋಡಿ

IND vs AUS World Cup Final: ವಿಶ್ವಕಪ್ ಫೈನಲ್ ಸಮಾರೋಪ ಸಮಾರಂಭಕ್ಕೆ ಭರ್ಜರಿ ತಯಾರಿ: ಮೋದಿ ಸ್ಟೇಡಿಯಂನಲ್ಲಿ ಪ್ರ್ಯಾಕ್ಟೀಸ್ ಹೇಗಿದೆ ನೋಡಿ

Vinay Bhat
|

Updated on: Nov 18, 2023 | 7:53 AM

Narendra Modi Stadium: ಭಾನುವಾರ ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದ್ದು, ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಪಂದ್ಯ ಆರಂಭಕ್ಕೂ ಮುನ್ನ ಬಾಲಿವುಡ್ ತಾರೆಯರು ನೃತ್ಯ ಮಾಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್​ಗೆ ಕೇವಲ ಒಂದೇ ದಿನ ಬಾಕಿಯಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಮಧ್ಯಾಹ್ನ 2 ಗಂಟೆಗೆ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವೆ ಪ್ರಶಸ್ತಿಗಾಗಿ ಅಂತಿಮ ಕಾದಾಟ ನಡೆಯಲಿದೆ. ಪಂದ್ಯ ಆರಂಭಕ್ಕೂ ಮುನ್ನ ಸಮಾರೋಪ ಸಮಾರಂಭ ಆಯೋಜನೆ ಮಾಡಲಿದೆ. ಇದರಲ್ಲಿ ಬಾಲಿವುಡ್ ತಾರೆಯರು ನೃತ್ಯ ಮಾಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಅಲ್ಲದೆ ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ತಂಡವು ತಮ್ಮ ವೈಮಾನಿಕ ಕೌಶಲ್ಯಗಳನ್ನು ಪ್ರಸ್ತುತಪಡಿಸಲಿದೆ. ಇದಕ್ಕಾಗಿ ಮೋದಿ ಸ್ಟೇಡಿಯಂನಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಇದೀಗ ಡ್ಯಾನ್ಸ್ ಪ್ರ್ಯಾಕ್ಟೀಸ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ