AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮ್ಯಾಂಚೆಸ್ಟರ್ ಟೆಸ್ಟ್​ಗೆ ಬುಮ್ರಾ ಲಭ್ಯತೆಯ ಬಗ್ಗೆ ಖಚಿತ ಮಾಹಿತಿ ನೀಡಿದ ಸಿರಾಜ್

IND vs ENG: ಮ್ಯಾಂಚೆಸ್ಟರ್ ಟೆಸ್ಟ್​ಗೆ ಬುಮ್ರಾ ಲಭ್ಯತೆಯ ಬಗ್ಗೆ ಖಚಿತ ಮಾಹಿತಿ ನೀಡಿದ ಸಿರಾಜ್

ಪೃಥ್ವಿಶಂಕರ
|

Updated on: Jul 21, 2025 | 7:39 PM

Share

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ, ಮೊಹಮ್ಮದ್ ಸಿರಾಜ್ ಅವರು ಜಸ್ಪ್ರೀತ್ ಬುಮ್ರಾ ಮ್ಯಾಂಚೆಸ್ಟರ್ ಪಂದ್ಯದಲ್ಲಿ ಆಡುವುದಾಗಿ ದೃಢಪಡಿಸಿದ್ದಾರೆ. ಭಾರತೀಯ ತಂಡವು ಈಗಾಗಲೇ ಸರಣಿಯಲ್ಲಿ 1-2 ಅಂತರದಲ್ಲಿ ಹಿನ್ನಡೆಯಲ್ಲಿದ್ದು, ಈ ನಿರ್ಣಾಯಕ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಸಮಬಲಗೊಳಿಸಲು ಪ್ರಯತ್ನಿಸುತ್ತಿದೆ. ಬುಮ್ರಾ ಅವರ ಆಟವು ಭಾರತದ ಬೌಲಿಂಗ್ ದಾಳಿಯನ್ನು ಬಲಪಡಿಸಲಿದೆ. ಮ್ಯಾಂಚೆಸ್ಟರ್‌ನಲ್ಲಿ ಭಾರತದ ಟೆಸ್ಟ್ ದಾಖಲೆ ಉತ್ತಮವಾಗಿಲ್ಲವಾದರೂ, ತಂಡವು ಗೆಲುವಿಗಾಗಿ ಹೋರಾಡಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಪಂದ್ಯಗಳ ಸರಣಿಯ ನಾಲ್ಕನೇ ಪಂದ್ಯ ಜುಲೈ 23 ರಿಂದ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭವಾಗಲಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ, ಭಾರತೀಯ ತಂಡದ ವೇಗಿ ಮೊಹಮ್ಮದ್ ಸಿರಾಜ್ ಪತ್ರಿಕಾಗೋಷ್ಠಿ ನಡೆಸಿ ತಂಡದ ಪ್ಲೇಯಿಂಗ್ 11 ರ ಬಗ್ಗೆ ದೊಡ್ಡ ಮಾಹಿತಿ ನೀಡಿದರು. ಪ್ರಸ್ತುತ ಟೀಂ ಇಂಡಿಯಾದಲ್ಲಿ ಗಾಯಾಳುಗಳ ಸಂಖ್ಯೆ ಹೆಚ್ಚಿದೆ. ಆದ್ದರಿಂದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆಗಳು ಖಚಿತ. ಇದೆಲ್ಲದರ ನಡುವೆ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಆಡುವುದರ ಬಗ್ಗೆ ಖಚಿತ ಮಾಹಿತಿ ನೀಡಿದ್ದಾರೆ.

ಬುಮ್ರಾ ಆಡಲಿದ್ದಾರೆ- ಸಿರಾಜ್

ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಸಿರಾಜ್ ದೊಡ್ಡ ಅಪ್ಡೇಟ್ ನೀಡಿದ್ದು, ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಆಡುತ್ತಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ಸರಣಿಯಲ್ಲಿ ಭಾರತ ತಂಡ ಈಗಾಗಲೇ 1-2 ಅಂತರದ ಹಿನ್ನಡೆಯಲ್ಲಿದ್ದು ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಸಮಬಲಗೊಳಿಸಲು ಬಯಸುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಜಸ್ಪ್ರೀತ್ ಬುಮ್ರಾ ಅವರ ಉಪಸ್ಥಿತಿಯು ಭಾರತೀಯ ಬೌಲಿಂಗ್ ವಿಭಾಗವನ್ನು ಬಲಪಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಮ್ಯಾಂಚೆಸ್ಟರ್‌ನಲ್ಲಿ ಭಾರತದ ದಾಖಲೆ

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಭಾರತದ ಟೆಸ್ಟ್ ದಾಖಲೆ ಅಷ್ಟೇನೂ ಉತ್ತಮವಾಗಿಲ್ಲ. ಭಾರತ ಈ ಮೈದಾನದಲ್ಲಿ ಇದುವರೆಗೆ 9 ಟೆಸ್ಟ್ ಪಂದ್ಯಗಳನ್ನು ಆಡಿದೆ, ಆದರೆ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಶುಭಮನ್ ಗಿಲ್ ನಾಯಕತ್ವದ ಭಾರತ ತಂಡವು ಇತಿಹಾಸವನ್ನು ಬದಲಾಯಿಸುವ ಸವಾಲನ್ನು ಎದುರಿಸಲಿದೆ. ಮತ್ತೊಂದೆಡೆ, ಭಾರತ ಈ ಪಂದ್ಯವನ್ನು ಸೋತರೆ, ಇಂಗ್ಲೆಂಡ್ ಸರಣಿಯಲ್ಲಿ ಅಜೇಯ ಮುನ್ನಡೆಯನ್ನು ಪಡೆಯುತ್ತದೆ. ಹೀಗಾಗಿ ಟೀಮ್ ಇಂಡಿಯಾ ಈ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲು ಬಯಸುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ