Loading video

IND vs PAK: ಡೈಲಾಗ್​ ಹೊಡೆದು ಟೀಂ ಇಂಡಿಯಾ ಆಟಗಾರರಿಗೆ ಜೋಶ್​ ತುಂಬಿದ ಮೈಸೂರಿನ ಹುಡುಗ

| Updated By: ವಿವೇಕ ಬಿರಾದಾರ

Updated on: Feb 23, 2025 | 10:01 AM

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿವೆ. ಮೈಸೂರಿನ ಮಕ್ಕಳು ಟೀಮ್ ಇಂಡಿಯಾ ಆಟಗಾರರಿಗೆ ಉತ್ಸಾಹ ತುಂಬಿ, ಶುಭ ಹಾರೈಸಿದ್ದಾರೆ. ಪಂದ್ಯಕ್ಕೆ ಉತ್ಸಾಹದ ವಾತಾವರಣ ನಿರ್ಮಾಣವಾಗಿದೆ.

ಭಾರತ ಹಾಗೂ ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಟೀಂ ಇಂಡಿಯಾ ಆಟಗಾರರಿಗೆ ಸಾಂಸ್ಕೃತಿಕ ನಗರಿ ಮೈಸೂರಿನ ಮಕ್ಕಳು ಡೈಲಾಗ್​ ಹೇಳುವ ಮೂಲಕ ಫುಲ್​ ಜೋಶ್ ತುಂಬಿದ್ದಾರೆ. ಟೀಂ ಇಂಡಿಯಾ ಪರ ಘೋಷಣೆ ಕೂಗಿ ಶುಭ ಹಾರೈಸಿದರು.