AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಒಂದೇ ಓವರ್‌ನಲ್ಲಿ 2 ಪ್ರಮುಖ ವಿಕೆಟ್ ಕಿತ್ತ ಪ್ರಸಿದ್ಧ್ ಕೃಷ್ಣ; ವಿಡಿಯೋ ನೋಡಿ

IND vs SA: ಒಂದೇ ಓವರ್‌ನಲ್ಲಿ 2 ಪ್ರಮುಖ ವಿಕೆಟ್ ಕಿತ್ತ ಪ್ರಸಿದ್ಧ್ ಕೃಷ್ಣ; ವಿಡಿಯೋ ನೋಡಿ

ಪೃಥ್ವಿಶಂಕರ
|

Updated on: Dec 06, 2025 | 4:13 PM

Share

India vs South Africa ODI: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ದುಬಾರಿಯಾಗಿ ಟೀಕೆಗೆ ಗುರಿಯಾಗಿದ್ದ ಪ್ರಸಿದ್ಧ್ ಕೃಷ್ಣ, ಮೂರನೇ ಪಂದ್ಯದಲ್ಲಿ ಕೊನೆಯ ಅವಕಾಶ ಪಡೆದರು. ಆರಂಭದಲ್ಲಿ ರನ್ ಬಿಟ್ಟುಕೊಟ್ಟರೂ, ನಂತರ ಒಂದೇ ಓವರ್‌ನಲ್ಲಿ ಮ್ಯಾಥ್ಯೂ ಬ್ರೀಟ್ಜ್ಕೆ ಮತ್ತು ಐಡೆನ್ ಮಾರ್ಕ್ರಾಮ್ ಅವರ ಪ್ರಮುಖ ವಿಕೆಟ್‌ಗಳನ್ನು ಕಬಳಿಸಿ ಭರ್ಜರಿ ವಾಪಸಾತಿ ಮಾಡಿದರು. ಈ ಮೂಲಕ ತಮ್ಮ ಪ್ರದರ್ಶನದ ಮೂಲಕ ಟೀಕಾಕಾರರಿಗೆ ಸೂಕ್ತ ಉತ್ತರ ನೀಡಿದರು.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸರಾಗವಾಗಿ ರನ್ ಬಿಟ್ಟುಕೊಟ್ಟು ಸಾಕಷ್ಟು ದುಬಾರಿಯಾಗಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೀಕೆಗೆ ಗುರಿಯಾಗಿದ್ದರು. ಅನುಭವಿಗಳಿಂದ ಹಿಡಿದು ಅಭಿಮಾನಿಗಳವರೆಗೆ ಎಲ್ಲರೂ ಪ್ರಸಿದ್ಧ್ ಅವರನ್ನು ತಂಡದಿಂದ ಕೈಬಿಡಬೇಕು ಎಂಬ ಒತ್ತಾಯ ಮಾಡಿದ್ದರು. ಆದಾಗ್ಯೂ ಸರಣಿಯ ಮೂರನೇ ಪಂದ್ಯದಲ್ಲಿ ಪ್ರಸಿದ್ಧ್​ಗೆ ಪ್ಲೇಯಿಂಗ್​ 11ನಲ್ಲಿ ಅವಕಾಶ ಸಿಕ್ಕಿದೆ. ತಮಗೆ ಸಿಕ್ಕಿರುವ ಈ ಕೊನೆಯ ಅವಕಾಶವನ್ನು ಮೊದಮೊದಲು ಸರಿಯಾಗಿ ಬಳಸಿಕೊಳ್ಳದ ಪ್ರಸಿದ್ಧ್ ಎಂದಿನಂತೆ ಸಾಕಷ್ಟು ರನ್ ಬಿಟ್ಟುಕೊಟ್ಟಿದ್ದರು. ಆದರೆ ಎರಡನೇ ಬಾರಿಗೆ ಬೌಲಿಂಗ್​ ಮಾಡಲು ಇಳಿದ ಪ್ರಸಿದ್ಧ್ ಒಂದೇ ಓವರ್​ನಲ್ಲಿ ಎರಡು ಪ್ರಮುಖ ವಿಕೆಟ್‌ಗಳನ್ನು ಉರುಳಿಸಿದರು.

ಮೊದಲಿಗೆ ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿ ಟೀಂ ಇಂಡಿಯಾವನ್ನು ಕಾಡಿದ್ದ ಮ್ಯಾಥ್ಯೂ ಬ್ರೀಟ್ಜ್ಕೆ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಬೀಳಿಸಿದ ಪ್ರಸಿದ್ಧ್ ಆ ಬಳಿಕ ಕಳೆದ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡುವ ಮೂಲಕ ಆಫ್ರಿಕಾ ತಂಡದ ಗೆಲುವಿನ ರೂವಾರಿ ಎನಿಸಿಕೊಂಡಿದ್ದ ನಾಯಕ ಐಡೆನ್ ಮಾರ್ಕ್ರಾಮ್ ಅವರನ್ನು ಪೆವಿಲಿಯನ್​ಗಟ್ಟಿದರು. ಬ್ರೀಟ್ಜ್ಕೆ 24 ರನ್ ಬಾರಿಸಿ ಔಟಾದರೆ, ಮಾರ್ಕ್ರಾಮ್ 1 ರನ್​ಗೆ ಸುಸ್ತಾದರು.